ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಯ ಪ್ರಕರಣ: ಠೇವಣಿ ಇರಿಸಲು ಮೌಖಿಕ ಸೂಚನೆ

Last Updated 22 ಮಾರ್ಚ್ 2017, 19:50 IST
ಅಕ್ಷರ ಗಾತ್ರ
ಬೆಂಗಳೂರು: ‘ಸಾಲ ಮರುಪಾವತಿಗೆ ಸಂಬಂಧಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡುವ ಮುನ್ನ ಒಂದಷ್ಟು ಮೊತ್ತ ಠೇವಣಿ ಇರಿಸುವ ಬಗ್ಗೆ ಚಿಂತಿಸಿ’ ಎಂದು ಉದ್ಯಮಿ ವಿಜಯ್ ಮಲ್ಯ ಪರ ವಕೀಲರಿಗೆ ಹೈಕೋರ್ಟ್‌ ಮೌಖಿಕ ಸೂಚನೆ ನೀಡಿದೆ.
 
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಯುನೈಟೆಡ್‌ ಬ್ರಿವೆರಿಸ್ ಹೋಲ್ಡಿಂಗ್ಸ್‌ ಲಿಮಿಟೆಡ್‌ (ಯುಬಿಎಚ್‌ಎಲ್‌) ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ  ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
 
‘ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಏಕಕಂತಿನ ತೀರುವಳಿ (ಒಟಿಎಸ್‌) ಪ್ರಯತ್ನ ನಡೆಸಲಾಗುತ್ತಿದೆ’ ಎಂದು    ಯುಬಿಎಚ್ಎಲ್‌   ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT