ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಬಲ್ ಟಿವಿ ನಿಯಂತ್ರಣ–ಕಣ್ಗಾವಲು ಸಮಿತಿ: ಅನುರಾಧಾ

Last Updated 23 ಮಾರ್ಚ್ 2017, 5:52 IST
ಅಕ್ಷರ ಗಾತ್ರ

ಉಡುಪಿ: ಕೇಬಲ್‌ ಟೆಲಿವಿಷನ್‌ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿಯನ್ನು ರಚಿಸಲಾಗಿದ್ದು, ಸ್ಥಳೀಯ ಕೇಬಲ್‌ ಟಿ.ವಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರ ಮಗಳ ಕುರಿತು ದೂರುಗಳಿದ್ದರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಗೆ ನೀಡಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧಾ ಹೇಳಿದರು.

ಉಡುಪಿ ಜಿಲ್ಲಾ ಮಟ್ಟದ ಕೇಬಲ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾ ರದ ನಿರ್ದೇಶನದಂತೆ ಕೇಬಲ್‌ ಟಿ.ವಿ ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ವಿರುದ್ಧ ದೂರು ನೀಡಲು ವಾರ್ತಾಧಿ ಕಾರಿ ಕಚೇರಿಯಲ್ಲಿ ಪ್ರತ್ಯೇಕ ದೂರು ಕೋಶ ಪ್ರಾರಂಭಿಸಲಾಗಿದೆ.

ಜಿಲ್ಲೆಯಲ್ಲಿ ನೋಂದಣಿಯಾಗಿರುವ ಎಲ್ಲ ಕೇಬಲ್ ಟಿ.ವಿ ನೆಟ್‌ವರ್ಕ್‌ಗಳು 30  ದಿನಗಳ ಒಳಗೆ ನೋಂದಣಿ ಪತ್ರದ ಪ್ರತಿಯನ್ನು ವಾರ್ತಾ ಇಲಾಖೆಗೆ ಸಲ್ಲಿಸಬೇಕು. ನೋಂದಣಿ ಮಾಡದಿದ್ದರೆ ಅನಧಿಕೃತ ಎಂದು ಪರಿಗಣಿಸಿ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಮಟ್ಟದ ಕೇಬಲ್ ನಿರ್ವಹಣಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಕೆ. ರೋಹಿಣಿ, ಸಮಿತಿಯ ಶಿಕ್ಷಣ ತಜ್ಞ ರಾಮಕೃಷ್ಣ ರಾವ್, ಮನಃಶಾಸ್ತ್ರಜ್ಞ ಡಾ.ವಿರೂಪಾಕ್ಷ ದೇವರಮನೆ, ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಬಿ. ಜಗದೀಶ್ ರಾವ್, ಸಮಾಜ ಶಾಸ್ತ್ರಜ್ಞ ದುಗ್ಗಪ್ಪ ಕಜೆಕಾರ್, ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ‘ವಿಶ್ವಾಸದ ಮನೆ’ ಸಂಸ್ಥೆಯ ಪ್ರೇಮಾ ಮಾರ್ಗರೆಟ್ ಕರ್ಕಡ, ಪವರ್ ಸಂಸ್ಥೆಯ ದಿವ್ಯಾರಾಣಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT