ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6500 ಚಿತ್ರಮಂದಿರಗಳಲ್ಲಿ ಬಾಹುಬಲಿ ಪ್ರದರ್ಶನ?

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ
Last Updated 23 ಮಾರ್ಚ್ 2017, 13:23 IST
ಅಕ್ಷರ ಗಾತ್ರ
ADVERTISEMENT

ನವದೆಹಲಿ: ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಒಟ್ಟು 6500 ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಜ್ಜಾಗಿದ್ದು, ಸಿನಿಮಾ ಇತಿಹಾಸದಲ್ಲಿ ಮತ್ತೊಂದು ದಾಖಲೆ ಸೃಷ್ಟಿಯಾಗಲಿದೆ.

ಎಸ್‌ಎಸ್‌ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಬಾಹುಬಲಿ ಅಂತಿಮ ಭಾಗ 6500 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಸಲ್ಮಾನ್‌ ಖಾನ್‌ ಅಭಿನಯದ ‘ಸುಲ್ತಾನ್‌’ 4,350 ಹಾಗೂ ಆಮಿರ್‌ ಖಾನ್‌ ಅಭಿನಯದ ‘ದಂಗಲ್‌’ ಸಿನಿಮಾ 4300 ಚಿತ್ರಮಂದಿಗಳಲ್ಲಿ ಬಿಡುಗಡೆಯಾಗಿತ್ತು.

ಮೊದಲ ಬಾರಿಗೆ ಚಿತ್ರವೊಂದು ದೇಶದ 6500 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಇದು ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು  ಎನ್ನಲಾಗಿದೆ.

ಈಗಾಗಲೇ ತೆಲುಗು, ಹಿಂದಿ, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ 10 ಕೋಟಿ ವೀಕ್ಷಣೆಯನ್ನು ಸಮೀಪಿಸುತ್ತಿದೆ.

ಚಿತ್ರರಂಗದ ಹಲವು ಪ್ರಮುಖರಿಂದ ಚಿತ್ರದ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಣಾ ದಗುಬಾಟಿಯಾ, ಅನುಷ್ಕಾ ಶೆಟ್ಟಿ ಸೇರಿದಂತೆ ಇತರರ ಅಭಿನಯವಿದ್ದು, ಏಪ್ರಿಲ್‌ 28ರಂದು ಚಿತ್ರ ತೆರೆಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT