ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಕಾ ಮಸೀದಿ ಸ್ಫೋಟ ಪ್ರಕರಣ: ಸ್ವಾಮಿ ಅಸೀಮಾನಂದಗೆ ಜಾಮೀನು

Last Updated 23 ಮಾರ್ಚ್ 2017, 17:48 IST
ಅಕ್ಷರ ಗಾತ್ರ

ನವದೆಹಲಿ: ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮಾಜಿ ಪ್ರಚಾರಕ ಸ್ವಾಮಿ ಅಸೀಮಾನಂದ ಅವರಿಗೆ ಹೈದರಾಬಾದ್‌ನ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ.

ಸದ್ಯ ಜೈಪುರ ಜೈಲಿನಲ್ಲಿರುವ ಅಸೀಮಾನಂದ ಅವರು ಕಾರಾಗೃಹದ ನಿಯಮಗಳನ್ನು ಪೂರೈಸಿ ಶೀಘ್ರದಲ್ಲೇ ಜೈಲಿನಿಂದ ಹೊರಬರಲಿದ್ದಾರೆ ಎಂದು ಅವರ ವಕೀಲ ಮನ್ಬೀರ್‌ ರಾಥಿ ತಿಳಿಸಿದ್ದಾರೆ.

‘2014ರ ಸಂಜೋತಾ ಎಕ್ಸ್‌ಪ್ರೆಸ್‌ ಸ್ಫೋಟ ಪ್ರಕರಣದಲ್ಲಿ ಇತ್ತೀಚೆಗೆ ಅವರಿಗೆ ಜಾಮೀನು ಸಿಕ್ಕಿದೆ. ಈಗ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕಿರುವುದರಿಂದ ಅವರು ಜೈಲಿನಿಂದ ಬಿಡುಗಡೆಯಾಗುವ ಕಾಲ ಹತ್ತಿರವಾಗಿದೆ’ ಎಂದು ಅವರು ಹೇಳಿದ್ದಾರೆ.

2007ರಲ್ಲಿ ನಡೆದಿದ್ದ ಅಜ್ಮೀರ್ ದರ್ಗಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ಅಸೀಮಾನಂದ ಅವರನ್ನು  ಇದೇ ವರ್ಷದ ಮಾ.8 ರಂದು ವಿಶೇಷ ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪು ನೀಡಿತ್ತು. ಈ ಘಟನೆಯಲ್ಲಿ ಮೂರು ಜನ ಸಾವನ್ನಪ್ಪಿ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT