ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವೈಎಸ್‌ಪಿ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

Last Updated 24 ಮಾರ್ಚ್ 2017, 4:42 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಂತಾಮಣಿ ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಚದುಲಪುರ ಕ್ರಾಸ್ ಬಳಿ ಇರುವ ಎಸ್‌ಪಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಾರೆಡ್ಡಿ, ‘ಚಿಂತಾಮಣಿ ತಾಲ್ಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚಾಗಿದೆ. ಈ ಬಗ್ಗೆ ಡಿವೈಎಸ್‌ಪಿ ಅವರಿಗೆ ಅನೇಕ ಬಾರಿ ದೂರು ನೀಡಿದರೂ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಕ್ರಮ ದಂಧೆ ನಡೆಸುವವರಿಂದ ಕೃಷ್ಣಮೂರ್ತಿ ಅವರು ಹಫ್ತಾ ವಸೂಲಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಡಿವೈಎಸ್ಪಿ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ತಾಲ್ಲೂಕು ಪಂಚಾಯಿತಿ ಎದುರು ಇತ್ತೀಚೆಗೆ ಜೆಡಿಎಸ್ ಸದಸ್ಯರು ಪ್ರತಿಭಟನೆ ಮಾಡುತ್ತಿದ್ದ ವೇಳೆಯೇ ಕಾಂಗ್ರೆಸ್‌ನವರು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದರು. ಇದರಿಂದಾಗಿ ಗದ್ದಲ ಉಂಟಾಯಿತು. ಅದಕ್ಕೆ ಕೃಷ್ಣಮೂರ್ತಿ ಅವರೇ ನೇರ ಹೊಣೆ’ ಎಂದು ಹೇಳಿದರು.

‘ಜನಸಾಮಾನ್ಯರಿಗೆ ಪೊಲೀಸ್‌ ಠಾಣೆಗಳಲ್ಲಿ ನ್ಯಾಯ ಸಿಗುತ್ತಿಲ್ಲ. ಅಧಿಕಾರಿಗಳು ಕಾಂಗ್ರೆಸ್ ಮುಖಂಡರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ತಾಲ್ಲೂಕಿನ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಆದ್ದರಿಂದ ಕೃಷ್ಣಮೂರ್ತಿ ಅವರನ್ನು ವರ್ಗಾವಣೆ ಮಾಡಲೇಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ತಿಳಿಸಿದರು.

ಜೆಡಿಎಸ್ ಚಿಂತಾಮಣಿ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎನ್.ರಾಜುಗೋಪಾಲ್, ನಗರ ಘಟಕ ಅಧ್ಯಕ್ಷ ಬಿ.ವಿ.ಮಂಜುನಾಥಾಚಾರಿ, ಯುವ ಘಟಕ ಅಧ್ಯಕ್ಷ ರಘು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT