ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗಿ ಭದ್ರತೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

Last Updated 24 ಮಾರ್ಚ್ 2017, 6:13 IST
ಅಕ್ಷರ ಗಾತ್ರ

ಗದಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ. 30 ರಿಂದ ಎಪ್ರಿಲ್ 12 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮಂಜುನಾಥ ಚವ್ಹಾಣ ಹಾಗೂ  ಹೆಚ್ಚುವರಿ ಜಿಲ್ಲಾಧಿಕಾರಿ ಐ.ಜಿ. ಗದ್ಯಾಳ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.   

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ  ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಒಟ್ಟು  54 ಪರೀಕ್ಷಾ ಕೇಂದ್ರಗಳಲ್ಲಿ  ಪರೀಕ್ಷೆ ನಡೆಯಲಿದ್ದು, ಈ ಬಾರಿ 14,628  ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.

ಪ್ರಶ್ನೆ ಪತ್ರಿಕೆಗಳ ಸುರಕ್ಷತೆ  ಬಗ್ಗೆ ಅಧಿಕಾರಿಗಳು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ವಿದ್ಯಾರ್ಥಿಗಳಿಗೆ ಗಾಳಿ, ಬೆಳಕು, ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಸಮರ್ಪಕ ವ್ಯವಸ್ಥೆ  ಕಲ್ಪಿಸಬೇಕು.ಪರೀಕ್ಷಾ ಕೆಂದ್ರದ ಸುತ್ತಮುತ್ತಲೂ ಝೆರಾಕ್ಸ ಅಂಗಡಿ, ಮೊಬೈಲ್, ಎಲೆಕ್ಟ್ರಾನಿಕ್ಸ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.  ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಮೊಬೈಲ್ ತರುವಂತಿಲ್ಲ  ಎಂದು ಸಿಇಒ ಹೇಳಿದರು.

ಪರೀಕ್ಷಾ ಸಮಯದಲ್ಲಿ ಕರ್ತವ್ಯ ನಿರ್ವಹಿಸುವ ಸ್ಥಾನಿಕ ಜಾಗೃತ ದಳದವರು, ಕೊಠಡಿ ಮೇಲ್ವಿಚಾರಕರು, ಪ್ರಶ್ನೆ ಪತ್ರಿಕೆ ಪಾಲಕರು, ಒಟ್ಟಾರೆ ಪರೀಕ್ಷಾ ಸಿಬ್ಬಂದಿ ಮೊಬೈಲ್ ಫೋನನ್ನು ಮುಖ್ಯ ಅಧೀಕ್ಷಕರ ಸುಪರ್ದಿಗೆ ನೀಡಬೇಕು. 

ಪರೀಕ್ಷಾ ಅವ್ಯವಹಾರ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ  ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT