ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಪೃಶ್ಯತೆ ನಿರ್ಮೂಲನೆಗೆ ಸಲಹೆ ಬೀದಿನಾಟಕದ ಮೂಲಕ ಅರಿವು

Last Updated 24 ಮಾರ್ಚ್ 2017, 7:12 IST
ಅಕ್ಷರ ಗಾತ್ರ

ಬೆಳಕವಾಡಿ(ಮಳವಳ್ಳಿ): ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಜಾರಿಯಲ್ಲಿದ್ದು, ಅದನ್ನು ಹೋಗಲಾಡಿಸಬೇಕೆಂದು ನಿವೃತ್ತ ಉಪಾನ್ಯಾಸಕ ಎಚ್.ಮಂಚಯ್ಯ ಮನವಿ ಮಾಡಿದರು.

ತಾಲ್ಲೂಕಿನ ಬೆಳಕವಾಡಿ ಗ್ರಾಮದಲ್ಲಿ ಬುಧವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಿಂದ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಬೀದಿ ನಾಟಕ ಪ್ರದರ್ಶನ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಸಮಾಜದ ಎಲ್ಲ ವರ್ಗದವರ ಜವಾಬ್ದಾರಿಯೂ ಇದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಹೋಟೆಲ್, ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ನಂತರ ಪೂರಿಗಾಲಿ ಜೈಭೀಮ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಬೀದಿನಾಟಕದ ಮೂಲಕ ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅಸ್ಪೃಶ್ಯತೆಯ ಬಗ್ಗೆ ಮತ್ತು ಅದರ ಕಾನೂನಿನ ಬಗ್ಗೆ ಅರಿವು ಮೂಡಿಸುವ ನಾಟಕ ಪ್ರದರ್ಶಿಸಲಾಯಿತು. ಇದಕ್ಕೂ ಮುನ್ನ ಬಿ.ಜಿ.ಪುರ, ಪೂರಿಗಾಲಿ ಗ್ರಾಮಗಳಲ್ಲಿಯೂ ಕಾರ್ಯಕ್ರಮಗಳು ನಡೆದವು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಅಂಕರಾಜು, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಸಿದ್ಧಲಿಂಗಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎನ್‌.ಜಯರಾಜು, ಕಂದಾಯ ನಿರೀಕ್ಷಕರಾದ ಮಹೇಂದ್ರ, ಪಿ.ಡಿ.ಒ ಸಿದ್ದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT