ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ

ವಿಶ್ವ ಜಲಸಂರಕ್ಷಣಾ ದಿನಾಚರಣೆ; ಕಾನೂನು ಸೇವೆಗಳ ಪ್ರಾಧಿಕಾರದ ಮೋಹನ್ ಪ್ರಭು
Last Updated 24 ಮಾರ್ಚ್ 2017, 7:18 IST
ಅಕ್ಷರ ಗಾತ್ರ

ಕುಶಾಲನಗರ: ನೀರು, ಜಲಮೂಲಗಳ ಸಂರಕ್ಷಣೆಗೆ ಎಲ್ಲರೂ ಚಿಂತನೆ ಹರಿಸಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಹೇಳಿದರು.

ಈಚೆಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ವಿಶ್ವ ಜಲಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಎನ್‌ಎಸ್‌ಎಸ್‌ ಘಟಕ, ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಕಾರ್ಯಕ್ರಮ ಏರ್ಪಡಿಸಿದ್ದವು.

ಮಳೆಯ ಅಭಾವದಿಂದಾಗಿ ಈಗ ಜಲಮೂಲಗಳು ಬತ್ತುತ್ತಿವೆ, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ಬಗ್ಗೆ ಎಲ್ಲರೂ ಎಚ್ಚರಗೊಳ್ಳಬೇಕಾಗಿದೆ. ನದಿ ಕಲುಷಿತಗೊಳಿಸದೆ, ನೀರನ್ನು ಪೋಲು ಮಾಡದೆ ಸಂರಕ್ಷಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಗುಡ್ಡೆಹೊಸೂರು ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ‘ಮುಂದೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ಬಗ್ಗೆ ಈಗಿನಿಂದಲೇ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.

ಕಾಲೇಜು ಪ್ರಾಂಶುಪಾಲ ಡಾ.ವೆಂಕಟೇಶ್ ವಹಿಸಿದ್ದರು. ವಕೀಲರಾದ ಬಿ.ಕೆ.ಶ್ರೀಧರ್, ಲೈಂಗಿಕ ದೌರ್ಜನ್ಯ-ಪೋಕ್ಸೊ ಅಧಿನಿಯಮ ವಿಚಾರದ ಬಗ್ಗೆ ಉಪನ್ಯಾಸ ನೀಡಿದರು.

ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ನಾರಾಯಣ, ಜಿಲ್ಲಾ ಕಾರ್ಯದರ್ಶಿ ಫಾತಿಮಾ, ಪಾರ್ವತಿ, ಧರಣಿ, ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಧು, ಪ್ರೇಮಲತಾ, ಸೂಫಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT