ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ; ನಾಮಪತ್ರ ಹಿಂಪಡೆಯಲು ಇಂದು ಕೊನೆ

Last Updated 24 ಮಾರ್ಚ್ 2017, 8:08 IST
ಅಕ್ಷರ ಗಾತ್ರ

ಮೈಸೂರು: ನಂಜನಗೂಡು ಮೀಸಲು ಕ್ಷೇತ್ರದ ಉಪಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ ವಿಭಿನ್ನ ಪ್ರಚಾರ ತಂತ್ರಗಳ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿವೆ.

‘ಉಪಚುನಾವಣೆಗೆ ಸ್ಪರ್ಧಿಸಲು ಸಲ್ಲಿಸಿರುವ ಉಮೇದುವಾರಿಕೆ ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದೆ. ಗುರುವಾರ ಯಾರೂ ನಾಮಪತ್ರ ಹಿಂಪಡೆದಿಲ್ಲ. ಸದ್ಯ ಕಣದಲ್ಲಿ 12 ಅಭ್ಯರ್ಥಿಗಳು ಇದ್ದಾರೆ’ ಎಂದು ಚುನಾವಣಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಪ್ರದೇಶ ಗಳಲ್ಲಿ ಪಥಸಂಚಲನ ನಡೆಸಲಾಯಿತು.
ಜಿಲ್ಲಾ ಚುನಾವಣಾಧಿಕಾರಿಯೂ ಅಗಿರುವ ಜಿಲ್ಲಾಧಿಕಾರಿ ಡಿ.ರಂದೀಪ್, ಸಹಾಯಕ ಪೊಲೀಸ್ ಅಧೀಕ್ಷಕಿ ಸುಜಿತಾ, ತಹಶೀಲ್ದಾರ್ ದಯಾನಂದ್ ಮತ್ತಿತರ ಅಧಿಕಾರಿಗಳು ಭಾಗವಹಿಸಿ ದ್ದರು. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ.

ಗೆಲುವು ನಮ್ಮದೇ–ಬಿಎಸ್‌ವೈ:  ‘ನಂಜನ ಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿ ಗಳು ಜಯ ಗಳಿಸಲಿದ್ದಾರೆ’ ಎಂದು ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಕೇಂದ್ರದತ್ತ ಬೊಟ್ಟು ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸವಾಗಿದೆ.

ಬರ ಪರಿಸ್ಥಿತಿ ನಿಭಾಯಿ ಸುವಲ್ಲಿಯೂ ಎಡವಿದ್ದಾರೆ. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಸ್ಪಷ್ಟ ನಿಲುವು ತಳೆಯುತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದರು. ಮಾಧ್ಯಮಗಳಿಗೆ ಕಡಿವಾಣ ಹೇರುವ ಸಂಬಂಧ ಪ್ರತಿಕ್ರಿಯಿಸಿ, ಮಾಧ್ಯಮಗಳು ಒಳ್ಳೆಯ ರೀತಿಯಲ್ಲಿ ಯೋಚಿಸಿ ಇತಿಮಿತಿಯಲ್ಲಿ ಸುದ್ದಿ ಮಾಡ ಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ಒಂದ ಕ್ಕೊಂದು ಪೂರಕವಾಗಿ ಸಾಗಬೇಕು ಎಂದರು. 

ಮತಗಟ್ಟೆ ಪರಿಶೀಲನೆ
ಮೈಸೂರು:
ನಂಜನಗೂಡು ಉಪಚುನಾವಣೆಯ ವೀಕ್ಷಕರಾಗಿ ನೇಮಕವಾಗಿರುವ ಹರಿಯಾಣದ ಐಎಎಸ್ ಅಧಿಕಾರಿ ಪಂಕಜ್ ಅವರು ಗುರುವಾರ ಕಸಬಾ ಹೋಬಳಿಯ ಮತಗಟ್ಟೆ ಕೇಂದ್ರಗಳನ್ನು ಪರಿಶೀಲಿಸಿದರು.

ಆಯಾ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳ ಗ್ರಾಮಸ್ಥರೊಂದಿಗೆ ಸಮಾ ಲೋಚನೆ ನಡೆಸಿದರು. ಹೊಸೂರು ಮತಗಟ್ಟೆ ಸಂಖ್ಯೆ 71 ಸೂಕ್ಷ್ಮ ಮತಗಟ್ಟೆ ಕೇಂದ್ರವಾಗಿದ್ದು ಮಾದರಿ ಮತಗಟ್ಟೆ ಯನ್ನಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವೀಕ್ಷಕರು ಹುಲ್ಲಹಳ್ಳಿ ವ್ಯಾಪ್ತಿಯ ಮತಗಟ್ಟೆಗಳನ್ನು ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT