ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ತಪಾಸಣೆ ಬಳಿಕ ಸ್ವದೇಶಕ್ಕೆ ಹಿಂದಿರುಗಿದ ಸೋನಿಯಾ

Last Updated 24 ಮಾರ್ಚ್ 2017, 11:40 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ರಾತ್ರಿ ಪುತ್ರ ರಾಹುಲ್‌ ಗಾಂಧಿ ಅವರ ಜತೆಗೂಡಿ ಸ್ವದೇಶಕ್ಕೆ ಹಿಂದಿರುಗಿದ್ದಾರೆ.

70 ವರ್ಷ ವಯಸ್ಸಿನ ನಾಯಕಿ ಆರೋಗ್ಯವಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಅವರು ಆರೋಗ್ಯ ತಪಾಸಣೆಗಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಪಂಚ ರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್‌ ಬಹುಮತ ಪಡೆದ ಪಂಜಾಬ್‌ನಲ್ಲಿ ಅಮರೀಂದರ್‌ ಸಿಂಗ್‌ ಅವರು ಮಾರ್ಚ್‌ 16ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಸೋನಿಯಾ ಅವರು ತೆರಳಿದ್ದ ಸ್ಥಳಕ್ಕೆ ರಾಹುಲ್‌ ತೆರಳಿದ್ದರು. ಸೋನಿಯಾ ಅವರು ರಾಹುಲ್‌ ಗಾಂಧಿ ಅವರ ಜತೆಗೂಡಿ ಸ್ವದೇಶಕ್ಕೆ ಹಿಂದಿರುಗಿದ್ದಾರೆ.

ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ನ ಅಧ್ಯಕ್ಷರು ಈಚೆಗಷ್ಟೆ ಮುಗಿದ ವಿಧಾನಸಭೆ ಚುನಾವಣೆ ಪ್ರಚಾರದಿಂದ ದೂರ ಉಳಿದಂತಾಗಿದೆ.

ಪಕ್ಷದ ಇಬ್ಬರೂ ನಾಯಕರು ಸ್ವದೇಶಕ್ಕೆ ಹಿಂದಿರುಗಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡ ಬಳಿಕ ಪಕ್ಷದಲ್ಲಿ ಆಂತರಿಕ ಬದಲಾವಣೆಗಳಾಲಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT