ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ನಿರ್ಧಾರದ ಬಗೆಗಿನ ನ್ಯೂಯಾರ್ಕ್‌ ಟೈಮ್ಸ್‌ ಸಂಪಾದಕೀಯಕ್ಕೆ ಕೇಂದ್ರ ಸರ್ಕಾರದ ಆಕ್ಷೇಪ

ಉತ್ತರ ಪ್ರದೇಶಕ್ಕೆ ಯೋಗಿ ಆದಿತ್ಯನಾಥ್‌ ಚುಕ್ಕಾಣಿ
Last Updated 24 ಮಾರ್ಚ್ 2017, 18:17 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಹುದ್ದೆಗೆ ಯೋಗಿ ಆದಿತ್ಯನಾಥ್‌ ಅವರನ್ನು ನೇಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದ ಕುರಿತು ಅಮೆರಿಕದ ಪ್ರಮುಖ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌ ಪ್ರಕಟಿಸಿರುವ ಮಾರ್ಚ್‌ 23ರ ಸಂಪಾದಕೀಯಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಉತ್ತರ ಪ್ರದೇಶಕ್ಕೆ ಯೋಗಿ ಆದಿತ್ಯನಾಥ್‌ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ಮೋದಿ ಅವರ ನಿರ್ಧಾರವನ್ನು ಸಂಪಾದಕೀಯದಲ್ಲಿ ಟೀಕಿಸಲಾಗಿದೆ. ಇದನ್ನು ವಿದೇಶಾಂಗ ವ್ಯವಹಾರಗಳ ಇಲಾಖೆ ಶುಕ್ರವಾರ ಆಕ್ಷೇಪಿಸಿದೆ.

‘ಎಲ್ಲಾ ಸಂಪಾದಕೀಯ ಅಥವಾ ಅಭಿಪ್ರಾಯಗಳು ಅವರವರ ನಿಲುವಿಗೆ ಬಿಟ್ಟವು. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯ ಜನಾದೇಶದ ಬಗ್ಗೆ ಸಂದೇಹ ವ್ಯಕ್ತಪಡಿಸುವುದು ಪ್ರಶ್ನಾರ್ಹ. ಅದು ತಮ್ಮ ದೇಶದ ಬಗ್ಗೆಯೇ ಇರಲಿ, ಇಲ್ಲವೇ ವಿದೇಶದ ಬಗ್ಗೆಯೇ ಆಗಿರಲಿ’ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ಗೋಪಾಲ್‌ ಬಗ್ಲೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT