ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5, 10 ಸಾವಿರ ಮುಖಬೆಲೆ ನೋಟುಗಳ ಮುದ್ರಣ ಇಲ್ಲ

Last Updated 24 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ₹5,000 ಮತ್ತು ₹ 10,000 ಮುಖಬೆಲೆಯ ನೋಟುಗಳನ್ನು ಮುದ್ರಿಸುವ ಆಲೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

‘ಇಂತಹ ನೋಟುಗಳ ಮುದ್ರಣ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಜತೆ ಚರ್ಚಿಸಲಾಗಿತ್ತು.   ಈ ದುಬಾರಿ ಮುಖಬೆಲೆಯ ನೋಟುಗಳನ್ನು ಮುದ್ರಿಸುವುದು ಸೂಕ್ತವಲ್ಲ ಎನ್ನುವ ನಿರ್ಧಾರಕ್ಕೆ ಬರಲಾಗಿದೆ’ ಎಂದು ಹಣಕಾಸು ರಾಜ್ಯ ಸಚಿವ ಅರ್ಜುನ್‌ ರಾಂ ಮೇಘ್ವಾಲ್‌  ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ನೋಟುಗಳ ಮುದ್ರಣದ ವೆಚ್ಚ ತಗ್ಗಿಸುವ ಉದ್ದೇಶದಿಂದ ಭವಿಷ್ಯದಲ್ಲಿ ಇಂತಹ ಗರಿಷ್ಠ ಬೆಲೆಯ ನೋಟುಗಳನ್ನು ಮುದ್ರಿಸುವ ಆಲೋಚನೆ ಏನಾದರೂ ಸರ್ಕಾರಕ್ಕೆ ಇದೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘₹1,000 ಮುಖಬೆಲೆಯ ನೋಟುಗಳನ್ನೂ ಮತ್ತೆ ಚಲಾವಣೆಗೆ ತರುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ  ಶಕ್ತಿಕಾಂತ್‌ ದಾಸ್‌ ಅವರೂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT