ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಎನ್.ಯು: ಕನ್ನಡ ಎಂ.ಫಿಲ್, ಪಿಎಚ್.ಡಿಗೆ ಅವಕಾಶ

Last Updated 24 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ 2017-18ನೆಯ ಸಾಲಿನಲ್ಲಿ ಕನ್ನಡ ಎಂ.ಫಿಲ್/ ಪಿಎಚ್. ಡಿ ಪದವಿಗೆ ಅಧ್ಯಯನ ನಡೆಸಲು ಅವಕಾಶ ನೀಡಿ ಪ್ರಕಟಣೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 5, 2017. ಆಸಕ್ತರು ಹೆಚ್ಚಿನ ವಿವರಗಳಿಗೆ ಜೆ ಎನ್ ಯು ಅಂತರ್ಜಾಲ ತಾಣಕ್ಕೆ ಭೇಟಿ ನೀಡಬಹುದು.

ಕನ್ನಡದಲ್ಲಿ ಎಂ.ಎ. ಪದವಿ ಇದ್ದು ಕನಿಷ್ಠ ಶೇ 55 ಅಂಕ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಮೇ ಮಧ್ಯ ಭಾಗದಲ್ಲಿ ಬೆಂಗಳೂರಿನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ.

ಆರಂಭದಲ್ಲಿ ಎರಡು ವರ್ಷ ಎಂ.ಫಿಲ್ ಪದವಿಗೆ ಅಭ್ಯಾಸ ನಡೆಸಿ ಯಶಸ್ವಿಯಾದವರು ನೇರವಾಗಿ ಪಿಎಚ್. ಡಿ ಅಧ್ಯಯನಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪೀಠದ ಮುಖ್ಯಸ್ಥ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT