ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಾವಧಿ ನಿಷೇಧ!

Last Updated 24 ಮಾರ್ಚ್ 2017, 19:15 IST
ಅಕ್ಷರ ಗಾತ್ರ

ಚುನಾವಣಾ ಸುಧಾರಣೆಗಳ ಕುರಿತು ಚರ್ಚೆಗಳು, ವಿಚಾರ ಸಂಕಿರಣಗಳು ಪುಂಖಾನು ಪುಂಖವಾಗಿ ನಡೆಯುತ್ತಲೇ ಇವೆ. ಇದೀಗ ಭಾರತದ ಚುನಾವಣಾ ಆಯೋಗ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲು ತಯಾರಾಗಿದೆ. ಇದು ಸ್ವಾಗತಾರ್ಹ ನಡೆ. ಈಗ, ಅಪರಾಧ ಎಸಗಿ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಶಿಕ್ಷೆ ಅನುಭವಿಸಿದ ರಾಜಕಾರಣಿಗಳು ಆರು ವರ್ಷ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಈ ನಿಷೇಧ ಅಪರಾಧಿಯ ಜೀವಾವಧಿವರೆಗೆ ಇರಬೇಕೆಂಬ ಪ್ರಮಾಣಪತ್ರವನ್ನು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದು ಅದು ಜಾರಿಗೆ ಬರುವಂತಾಗಬೇಕು. ಸ್ವಚ್ಛ ಭಾರತ ಅಭಿಯಾನದಲ್ಲಿ ಇದೂ ಸ್ವಾಗತಾರ್ಹ ಕ್ರಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT