ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್‌: ಹರಿಕೃಷ್ಣಗೆ ಜಯ

Last Updated 24 ಮಾರ್ಚ್ 2017, 20:00 IST
ಅಕ್ಷರ ಗಾತ್ರ

ಶೆಂಜೆನ್‌, ಚೀನಾ (ಪಿಟಿಐ): ಭಾರತದ ಪಿ. ಹರಿಕೃಷ್ಣ ಇಲ್ಲಿ ನಡೆಯುತ್ತಿರುವ ಶೆಂಜೆನ್ ಗ್ರ್ಯಾಂಡ್‌ಮಾಸ್ಟರ್‌ ಚೆಸ್ ಟೂರ್ನಿಯಲ್ಲಿ ಶುಕ್ರವಾರ ಇಂಗ್ಲೆಂಡ್‌ನ ಮೈಕಲ್ ಆ್ಯಡಮ್ಸ್ ವಿರುದ್ಧ ಗೆಲುವು ದಾಖಲಿಸುವ ಮೂಲಕ ಮೊದಲ ಸ್ಥಾನಕ್ಕೆ ಏರಿದ್ದಾರೆ.

ವಿಶ್ವ ರ್‍ಯಾಂಕಿಂಗ್‌ನಲ್ಲಿ 14ನೇ ಸ್ಥಾನದಲ್ಲಿರುವ ಹರಿಕೃಷ್ಣ ಎರಡನೇ ಸುತ್ತಿನ ಪಂದ್ಯದಲ್ಲಿ ಆ್ಯಡಮ್ಸ್ ಎದುರು ತಮ್ಮ ಶ್ರೇಷ್ಠ ಸಾಮರ್ಥ್ಯ ತೋರಿದರು.

ಮೊದಲ ಸುತ್ತಿನಲ್ಲಿ ರಷ್ಯಾದ ಪೀಟರ್ ಸ್ವೀಡ್ಲರ್ ವಿರುದ್ಧ ಡ್ರಾ ಮಾಡಿಕೊಂಡಿದ್ದ ಭಾರತದ ಆಟಗಾರ ಎರಡನೇ ಪಂದ್ಯದ ಗೆಲುವಿನೊಂದಿಗೆ 1.5 ಪಾಯಿಂಟ್ಸ್ ಗಳಿಸುವ ಮೂಲಕ ಅಗ್ರಸ್ಥಾನ ತಮ್ಮದಾಗಿಸಿಕೊಂಡರು.

ಕಪ್ಪು ಕಾಯಿಗಳೊಂದಿಗೆ ಆಡಿದ ಹರಿಕೃಷ್ಣ ತಮಗಿಂತ ರ್‍ಯಾಂಕಿಂಗ್‌ನಲ್ಲಿ ಮೇಲಿನ ಸ್ಥಾನದಲ್ಲಿರುವ (12) ಆ್ಯಡಮ್ಸ್‌ ಎದುರು ಆರಂಭದಲ್ಲಿ ಒತ್ತಡದಲ್ಲೇ ಆಡಿದರು. ಆದರೆ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT