ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್ ಪರೀಕ್ಷೆ:ಮತ್ತೆ 4 ನಗರ ಸೇರ್ಪಡೆ

Last Updated 24 ಮಾರ್ಚ್ 2017, 20:51 IST
ಅಕ್ಷರ ಗಾತ್ರ

ನವದೆಹಲಿ: ಈ ಸಾಲಿನ ‘ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ’ (ನೀಟ್) ರಾಜ್ಯದ ದಾವಣಗೆರೆ, ಹುಬ್ಬಳ್ಳಿ, ಮೈಸೂರು ಮತ್ತು ಉಡುಪಿಗಳಲ್ಲೂ ನಡೆಯಲಿದೆ. ಈಗಾಗಲೆ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿರುವವರು, ಅವನ್ನು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಾದ ನೀಟ್‌, ಕಳೆದ ಸಾಲಿನಲ್ಲಿ ದೇಶದಾದ್ಯಂತ ಒಟ್ಟು 80 ನಗರಗಳಲ್ಲಷ್ಟೇ ನಡೆದಿತ್ತು. ಈ ಬಾರಿ ಪರೀಕ್ಷೆ ಒಟ್ಟು 103 ನಗರಗಳಲ್ಲಿ ನಡೆಯಲಿದೆ. ಹೊಸದಾಗಿ ಆಯ್ಕೆಯಾದ 23 ನಗರಗಳಲ್ಲಿ ರಾಜ್ಯದ ನಾಲ್ಕು ನಗರಗಳೂ ಸೇರಿವೆ.

‘ಈ ಹಿಂದಿನ ಸಾಲಿನಲ್ಲಿ ಸುಮಾರು ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಈ ಸಾಲಿನಲ್ಲಿ 11.35 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ಪರೀಕ್ಷೆ ನಡೆಯಲಿರುವ ನಗರಗಳ ಸಂಖ್ಯೆಯನ್ನು ಹಾಗೂ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ’ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಕೇಂದ್ರ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನೀಟ್‌ ಪರೀಕ್ಷೆಯನ್ನು ಆಯೋಜಿಸುತ್ತಿದ್ದು, ಮೇ 7 ರಂದು ಪರೀಕ್ಷೆ ನಡೆಯಲಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿರುವವರು, ಸಿಬಿಎಸ್‌ಇ ಜಾಲತಾಣಕ್ಕೆ ಭೇಟಿ ನೀಡಿ ಅದನ್ನು ಬದಲಿಸಿಕೊಳ್ಳಬಹುದು. ಮಾರ್ಚ್‌ 24–27ರವರೆಗೆ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT