ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಶೀಘ್ರ ಕನಿಷ್ಠ ದರ ನಿಗದಿ

Last Updated 24 ಮಾರ್ಚ್ 2017, 20:56 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಆ್ಯಪ್‌ ಆಧಾರಿತ  ಟ್ಯಾಕ್ಸಿಗಳಿಗೆ ಪ್ರತಿ ಕಿಲೋ ಮೀಟರ್‌ಗೆ ಕನಿಷ್ಠ ದರ ನಿಗದಿಪಡಿಸಲು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಶುಕ್ರವಾರ ಶ್ರೀನಿವಾಸ ಮಾನೆ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕನಿಷ್ಠ ದರ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ಸಲ್ಲಿಸಿದೆ.  ಅದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ನಗರದಲ್ಲಿ ಓಲಾ, ಯು.ಟುಸ್‌ ಮತ್ತು ಉಬರ್‌ ಕ್ಯಾಬ್‌ಗಳು ಪರವಾನಗಿ ಪಡೆದು ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುತ್ತಿವೆ. ಈಗ ಆ್ಯಪ್‌ ಆಧಾರಿತ ಟ್ಯಾಕ್ಸಿಗಳಿಗೆ ಮೊದಲ 4 ಕಿಲೋ ಮೀಟರ್‌ಗಳಿಗೆ ಕನಿಷ್ಠ ದರ ಮತ್ತು ನಂತರದ ಪ್ರತಿ ಕಿಲೋ ಮೀಟರ್‌ಗಳಿಗೆ  ಗರಿಷ್ಠ  ಪ್ರಯಾಣ ದರಗಳನ್ನು ನಿಗದಿ ಪಡಿಸಲಾಗಿದೆ. ಆದರೆ, ಪ್ರತಿ ಕಿ.ಲೋ ಮೀಟರ್‌ಗೆ ಕನಿಷ್ಠ ದರ ಈವರೆಗೂ ನಿಗದಿ ಆಗಿರಲಿಲ್ಲ ಎಂದು ಸಚಿವರು ಹೇಳಿದರು.

ವಾಹನ ವೆಚ್ಚ, ಡೀಸೆಲ್‌ ವೆಚ್ಚ, ಗ್ರಾಹಕ ಸೂಚ್ಯಂಕ, ಭತ್ಯೆ, ವಿಮೆ ಮತ್ತು ಪೂರಕವಾದ ವೈಜ್ಞಾನಿಕ ಅಂಶಗಳನ್ನು ಪರಿಗಣಿಸಿ ದರ ನಿಗದಿ ಮಾಡಲಾಗುವುದು ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT