ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸಿಡ್‌ ದಾಳಿ ಸಂತ್ರಸ್ಥೆ ಸಮೀಪ ಸೆಲ್ಫಿ: ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ ಅಮಾನತು

Last Updated 25 ಮಾರ್ಚ್ 2017, 7:04 IST
ಅಕ್ಷರ ಗಾತ್ರ

ಲಖನೌ: ಸಾಮೂಹಿಕ ಅತ್ಯಾಚಾರ ಹಾಗೂ ಆಸಿಡ್‌ ದಾಳಿಗೊಳಗಾದ ಮಹಿಳೆಯ ಚಿಕಿತ್ಸಾ ಕೊಠಡಿಯಲ್ಲಿ ಸೆಲ್ಫಿ ತೆಗೆದುಕೊಂಡ ಇಬ್ಬರು ಮಹಿಳಾ ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಸಂತ್ರಸ್ಥ ಮಹಿಳೆ ಕಿಂಗ್‌ ಜಾರ್ಜ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳಕ್ಕೆ ನಿಯೋಜಿತರಾಗಿದ್ದ ಮೂವರು ಮಹಿಳಾ ಕಾನ್‌ಸ್ಟೆಬಲ್‌ಗಳು ಚಿಕಿತ್ಸಾ ಕೊಠಡಿಯಲ್ಲಿ ಸಂತ್ರಸ್ತೆಯ ಸಮೀಪವೇ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿರುವ ಪೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಲಖನೌ ವಲಯದ ಐಜಿ ಸತೀಶ್‌ ಗಣೇಶ್‌ ಕ್ರಮ ಕೈಗೊಂಡಿದ್ದಾರೆ. ರಜಿನಿ ಬಾಲಾ ಸಿಂಗ್‌, ಡೈಸಿ ಸಿಂಗ್‌ ಎಂಬ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಿದ್ದು, ಮೂರನೇ ಕಾನ್‌ಸ್ಟೆಬಲ್‌ ವಿರುದ್ಧ ತನಿಖೆಗೆ ಅದೇಶಿಸಿದ್ದಾರೆ.

ಅಲಹಾಬಾದ್‌– ಲಖನೌ ಮಾರ್ಗವಾಗಿ ಸಂಚಾರಿಸುವ ಗಂಗಾ ಗೋಮತಿ ಎಕ್ಸ್​ಪ್ರೆಸ್ ರೈಲಿನಲ್ಲಿ ಇಬ್ಬರು ದುಷ್ಕರ್ವಿುಗಳು 45 ವರ್ಷದ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ, ಅತ್ಯಾಚಾರ ವೆಸಗಿದ್ದರು.

ಸಂತ್ರಸ್ಥ ಮಹಿಳೆ ತನ್ನ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಲಖನೌ ರೈಲು ನಿಲ್ದಾಣದ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದರು. ನಂತರ ರೈಲ್ವೆ ಪೊಲೀಸರು ಸಂತ್ರಸ್ಥ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಪ್ರಕರಣ ಸಂಬಂಧ ಲಖನೌ ವಲಯದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT