ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 52 ಪರೀಕ್ಷಾ ಕೇಂದ್ರ: ಡಿ.ಸಿ

30 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಸಿದ್ಧತಾ ಸಭೆ
Last Updated 25 ಮಾರ್ಚ್ 2017, 7:18 IST
ಅಕ್ಷರ ಗಾತ್ರ

ಉಡುಪಿ: ಎಸ್ಸೆಸ್ಸೆಲ್ಸಿ ಪರೀಕ್ಷೆ  ಸುಸೂತ್ರ ವಾಗಿ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ  ಪರೀಕ್ಷೆ ಸಿದ್ಧತೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ್‌ 30ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು ಜಿಲ್ಲೆಯಲ್ಲಿ ಒಟ್ಟು 15,583 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ 52 ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗುವುದು.

ಪ್ರಶ್ನೆ ಪತ್ರಿಕೆಗಳ ವಿತರಣೆಗೆ 14 ಮಾರ್ಗ ಗಳನ್ನು ಈಗಾಗಲೇ ಗುರುತು ಮಾಡಲಾ ಗಿದೆ. ಜಿಲ್ಲೆಯಲ್ಲಿ ಯಾವುದೇ ಅತಿ ಸೂಕ್ಷ್ಮ ಮತ್ತು ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಲ್ಲ. ಅವಧಿ ಮುಗಿಯುವ ವರೆಗೂ ಯಾವು ದೇ ವಿದ್ಯಾರ್ಥಿ ಪ್ರಶ್ನೆ ಪತ್ರಿಕೆಯನ್ನು ಹೊರಗೆ ಕೊಂಡೊಯ್ಯುವಂತಿಲ್ಲ ಎಂದರು.

ಪರೀಕ್ಷೆ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು 9.15ರ ಒಳಗೆ ಪರೀಕ್ಷಾ ಕೇಂದ್ರದಲ್ಲಿರ ಬೇಕು. 9.30ರ  ನಂತರ ಪರೀಕ್ಷ ಕೇಂದ್ರದ ಒಳಗೆ ಪ್ರವೇಶ ಇರುವುದಿಲ್ಲ ಎಂದು ಹೇಳಿದರು.

ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಕ್ಕೆ ಬರಲು ಸಹಾಯವಾಗುವಂತೆ ಅಗತ್ಯವಿರುವ ಕಡೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದರು. ಬಸ್‌ ಅಗತ್ಯ ಇರುವ ಊರುಗಳನ್ನು ಗುರುತಿಸುಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್‌. ದಿವಾಕರ ಶೆಟ್ಟಿ ಅವರಿಗೆ ತಾಕೀತು ಮಾಡಿದರು.

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದ್ದು, ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯ ಲ್ಲಿರಲಿದೆ. ಪರೀಕ್ಷಾ ಕೇಂದ್ರದ ಸಮೀಪದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗುವುದು ಎಂದರು.

ನಕಲು ಮಾಡುವುದು ಮತ್ತು ನಕಲು ಮಾಡಲು ಸಹಕರಿಸುವುದು ಅಪರಾಧ ವಾಗುತ್ತದೆ, ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ಹಾಗೂ ಅಕ್ರಮ ಪತ್ತೆ ತಂಡವನ್ನು ನೇಮಕ ಮಾಡಲಾಗು ವುದು. ಪರೀಕ್ಷೆ ಆರಂಭವಾಗುವ 1 ಗಂಟೆ ಮೊದಲು ಖಜಾನೆಯಿಂದ ಪ್ರಶ್ನೆ ಪತ್ರಿಕೆ ತೆಗೆಯಲಾಗುವುದು ಎಂದು ದಿವಾಕರ ಶೆಟ್ಟಿ ತಿಳಿಸಿದರು.

ಡಯಟ್‌ನ ಪ್ರಾಂಶುಪಾಲ ಶೇಖರ್, ಖಜಾನೆ ಇಲಾಖೆ ಉಪ ನಿರ್ದೇಶಕ ಮಾಧವ ಹೆಗಡೆ, ಶಿಕ್ಷಣ ಇಲಾಖೆ ಅಧಿ ಕಾರಿಗಳು, ವಿವಿಧ ಶಾಲೆಗಳು ಮುಖ್ಯೋ ಪಧ್ಯಾಯರು ಉಪಸ್ಥಿತರಿದ್ದರು.

*
ಈ ಬಾರಿಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯನ್ನು ಪ್ರತ್ಯೇಕವಾಗಿ ನೀಡಲಾಗು ವುದು, ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗೆ ಮೊಬೈಲ್ ಬಳಕೆ  ನಿಷೇಧಿಸಲಾಗಿದೆ.
-ಪ್ರಿಯಾಂಕ ಮೇರಿ ಫ್ರಾನ್ಸಿಸ್,
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT