ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಸರ ಜಾಗೃತಿ ಅಭಿಯಾನ ಶೀಘ್ರ’

ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ
Last Updated 25 ಮಾರ್ಚ್ 2017, 8:24 IST
ಅಕ್ಷರ ಗಾತ್ರ

ರಾಮನಗರ: ‘ಪರಿಸರದ ಬಗ್ಗೆ ಕಾಳಜಿ ವಹಿಸುವುದು, ಕಸ ವಿಲೇವಾರಿ ಮತ್ತು ನೀರಿನ ಮಿತ ಬಳಕೆ ವಿಚಾರದಲ್ಲಿ ಜನತೆಯಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಸದ್ಯದಲ್ಲೇ ಕೈಗೊಳ್ಳಲಾಗುವುದು’ ಎಂದು ನಗರಸಭೆ ಅಧ್ಯಕ್ಷ ಪಿ. ರವಿಕುಮಾರ್ ಹೇಳಿದರು.

ಸ್ವಚ್ಛ ಭಾರತ್ ಮಿಷನ್ ಮತ್ತು ಕ್ಲೀನ್ ಅವರ್ ಸಿಟಿ ಯೋಜನೆಯಡಿಯಲ್ಲಿ ನಗರಸಭೆ ವತಿಯಿಂದ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸ್ವಚ್ಛ ಭಾರತ ಅಭಿಯಾನ ಅತ್ಯಂತ ಒಳ್ಳೆಯ ಕಾರ್ಯಕ್ರಮ. ಪರಿಸರ ಉಳಿಸುವ ಪ್ರಯತ್ನಕ್ಕೆ ಅಧಿಕಾರಿಗಳಾದಿಯಾಗಿ, ಚುನಾಯಿತ ಪ್ರತಿನಿಧಿಗಳು ತೊಡಗಿಸಿಕೊಂಡಾಗ ಮಾತ್ರ ಪ್ರಯತ್ನ ಸಫಲವಾಗುತ್ತದೆ. ಸಮಾಜದ ಹಿರಿಯರು ಪರಿಸರದ ಬಗ್ಗೆ ಜಾಗೃತಿ ಮೂಡಿಸಿಕೊಂಡು ಕಿರಿಯರಲ್ಲಿ ಜಾಗೃತಿ ಮೂಡಿಸಿ’ ಎಂದು ತಿಳಿಸಿದರು.

ಸ್ವಯಂಸೇವಾ ಸಂಸ್ಥೆಯ ಪ್ರತಿನಿಧಿ ಮೋಹನ್ ಮಾತನಾಡಿ, ‘ಶುದ್ಧ ಕುಡಿಯುವ ನೀರಿಗೆ ಕೊರತೆ, ವಾಯು ಮಾಲಿನ್ಯ ಉಂಟಾಗಿರುವುದರಿಂದ ಆಮ್ಲಜನಕಕ್ಕೂ ಕೊರತೆ ಉಂಟಾಗುವ ದಿನಗಳು ದೂರವಿಲ್ಲ.

ವಿಶ್ವದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಪೈಕಿ ಶೇ 85 ನೀರು ಕಲುಷಿತವಾಗಿವೆ. ಮಾನವರಲ್ಲಿ ಕಾಣಿಸಿಕೊಳ್ಳುತ್ತಿರುವ ರೋಗಗಳು ಶೇ 82 ಅಶುದ್ಧ ಗಾಳಿ ಮತ್ತು ನೀರಿನಿಂದಲೇ ಉಂಟಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಬಹುಮಾನ ವಿತರಣೆ: ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಮತ್ತು ಚಿತ್ರ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಗರಸಭೆ ಉಪಾಧ್ಯಕ್ಷೆ ಸಮೀನಾ ತಾಜ್‌, ಸದಸ್ಯರಾದ ಆರ್.ಎ. ಮಂಜುನಾಥ್‌, ಎಚ್.ಎಸ್. ಲೋಹಿತ್ , ಆರ್. ಮುತ್ತುರಾಜ್‌, ಗೇಬ್ರಿಯಲ್‌, ಅಬ್ದುಲ್ ಬಾಸಿದ್‌, ಅಧಿಕಾರಿಗಳಾದ ಗಿರೀಶ್, ಶ್ರೀನಿವಾಸ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT