ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಒಹಿಯೊ ನೈಟ್‌ಕ್ಲಬ್‌ನಲ್ಲಿ ಗುಂಡಿನ ದಾಳಿ

Last Updated 26 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ : ಒಹಿಯೊದ ಸಿನ್ಸಿನಾಟಿಯಲ್ಲಿರುವ ನೈಟ್‌ ಕ್ಲಬ್‌ನಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಸತ್ತು, 15 ಮಂದಿ ಗಾಯಗೊಂಡಿದ್ದಾರೆ.

ಕ್ಲಬ್‌ಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ದಾಳಿ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ದಾಳಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಭಯೋತ್ಪಾದಕ ಕೃತ್ಯದ ಸಾಧ್ಯತೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.

‘ಗುಂಡಿನ ದಾಳಿ ನಡೆಯುವ ವೇಳೆ ಕ್ಯಾಮಿಯೊ ನೈಟ್‌ಲೈಫ್‌ ಕ್ಲಬ್‌ನಲ್ಲಿ ನೂರಾರು ಮಂದಿ ಇದ್ದರು’ ಎಂದು ಸಹಾಯಕ ಪೊಲೀಸ್‌ ಅಧಿಕಾರಿ
ಪೌಲ್‌ ನೆಡಿಗೇಟ್‌ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

‘ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಗೊಂದಲದ ವಾತಾವರಣ ನಿರ್ಮಾಣವಾಯಿತು. ಜನರು ದಿಕ್ಕಾಪಾಲಾಗಿ ಓಡಿದರು’ ಎಂದು ಅವರು ವಿವರಿಸಿದ್ದಾರೆ.
‘ಮಧ್ಯರಾತ್ರಿ 1.30 ರ ಸುಮಾರಿಗೆ ದಾಳಿ ನಡೆದಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ’ ಎಂದು ಇನ್ನೊಬ್ಬ ಅಧಿಕಾರಿ ಕಿಮ್‌ ವಿಲಿಯಮ್ಸ್‌ ಹೇಳಿದ್ದಾರೆ.
‘ಇಂತಹ ಘಟನೆ ನಡೆದ ಕೂಡಲೇ ಜನರು ಸ್ಥಳದಿಂದ ಓಡಿಹೋಗುವರು. ಆದ್ದರಿಂದ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕುವುದು ಕಷ್ಟವಾಗುತ್ತದೆ’ ಎಂದಿದ್ದಾರೆ.  ‘15 ಮಂದಿಗೆ ಗುಂಡೇಟು ತಗುಲಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ’ ಎಂದು ವಿಲಿಯಮ್ಸ್‌ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT