ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಮುಸಲ್ಮಾನರು ಅಲ್ಪ ಸಂಖ್ಯಾತರೇ: ‘ಸುಪ್ರೀಂ’ ಪ್ರಶ್ನೆ

Last Updated 27 ಮಾರ್ಚ್ 2017, 20:23 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸಲ್ಮಾನರನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಬೇಕೇ ಎಂಬುದೂ ಸೇರಿ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೋಮವಾರ ಸೂಚಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ನೇತೃತ್ವದ, ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ಎಸ್‌.ಕೆ. ಕೌಲ್‌ ಅವರನ್ನು ಒಳಗೊಂಡ  ನ್ಯಾಯಪೀಠ ಈ ಸೂಚನೆ ನೀಡಿದ್ದು, ಎರಡೂ ಸರ್ಕಾರಗಳು ಚರ್ಚಿಸಿ ನಾಲ್ಕು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ತಿಸಿದೆ.

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾದ ಸೌಲಭ್ಯಗಳನ್ನು ಮುಸಲ್ಮಾನರು ಪಡೆಯುತ್ತಿರುವ ಬಗ್ಗೆ ವಕೀಲ ಅಂಕುರ್‌ ಶರ್ಮಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್‌ ವಿಚಾರಣೆಗೆ ಎತ್ತಿಕೊಂಡಿದೆ. ಈ ಬಗ್ಗೆ ಸಕಾಲದಲ್ಲಿ ಪ್ರತಿಕ್ರಿಯೆ ನೀಡದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ನ್ಯಾಯಾಲಯ ಕಳೆದ ತಿಂಗಳು ಕೇಂದ್ರಕ್ಕೆ ₹ 30ಸಾವಿರ ದಂಡ ವಿಧಿಸಿತ್ತು.

ಇದು ಅತಿ ಪ್ರಮುಖ ವಿಚಾರ ಎಂದಿರುವ ಕೋರ್ಟ್‌, ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದೆ. ‘ರಾಜ್ಯದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಕಾನೂನುಬಾಹಿರವಾಗಿ ಅನರ್ಹರಿಗೆ ನೀಡಲಾಗುತ್ತಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುವ ಕೆಲಸ ಆಗಬೇಕು’ ಎಂದು ಅರ್ಜಿದಾರ ಶರ್ಮಾ ಅವರು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT