ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ: ದಿನಾಂಕ ವಿಸ್ತರಣೆಗೆ ಮನವಿ

Last Updated 27 ಮಾರ್ಚ್ 2017, 20:37 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ಏ.15 ರವರೆಗೆ ವಿಸ್ತರಿಸುವಂತೆ ಆರ್‌ಟಿಇ ಮಕ್ಕಳ,ಪೋಷಕರ ಸಂಘ ಒತ್ತಾಯಿಸಿದೆ.

ಅರ್ಜಿ ಸಲ್ಲಿಸಲು ಮಾರ್ಚ್‌ 1ರಿಂದ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ, ಸರ್ವರ್‌ ಸಮಸ್ಯೆ ಯಿಂದಾಗಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಕೆ ಸಾಧ್ಯವಾಗಿಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳು ಇನ್ನೂ ಮುಂದುವರಿದಿವೆ. ಆದ್ದರಿಂದ ಅರ್ಜಿ ಸಲ್ಲಿಕೆ ವಿಸ್ತರಣೆ ಮಾಡ ಬೇಕು ಎಂದು ಮನವಿ ಮಾಡಲಾಗಿದೆ.
‘ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಸರ್ವ ಶಿಕ್ಷಣ ಅಭಿಯಾನ ಯೋಜನಾ ನಿರ್ದೇಶಕ ರೊಂದಿಗೆ ಚರ್ಚಿಸಲಾಗಿದೆ. ದಿನಾಂಕ ವಿಸ್ತರಿಸುವ ಭರವಸೆ ನೀಡಿದ್ದಾರೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್. ಯೋಗಾನಂದ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT