ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹ
Last Updated 28 ಮಾರ್ಚ್ 2017, 6:19 IST
ಅಕ್ಷರ ಗಾತ್ರ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಲು ವಿಫಲವಾಗಿದೆ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದ ಮೂಲಕ ಸಾಮಾನ್ಯ ಜನರಿಗೆ ಆರ್ಥಿಕ ಹೊರೆ ಸೃಷ್ಟಿ ಸಿದೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
 
ಆರಂಭದಲ್ಲಿ ಹಂಪನಕಟ್ಟೆಯಲ್ಲಿ ರುವ ಮಿನಿ ವಿಧಾನಸೌಧದಿಂದ ಜಿಲ್ಲಾಧಿ ಕಾರಿ ಕಚೇರಿ ಪ್ರವೇಶ ದ್ವಾರದವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟ ನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಾರ್ವ ಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಿಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಮಂಗ ಳೂರು ಮಹಾನಗರ ಪಾಲಿಕೆ ಆಡಳಿತವು ಕುಡಿಯುವ ನೀರಿನ ಕೃತಕ ಅಭಾವ ಸೃಷ್ಟಿಸಿ, ಜನರಿಗೆ ತೊಂದರೆ ನೀಡುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿಪಿಎಂ ಮಂಗಳೂರು ನಗರ ದಕ್ಷಿಣ ಘಟಕದ ಕಾರ್ಯದರ್ಶಿ ಸುನೀಲ್‌ ಕುಮಾರ್‌ ಬಜಾಲ್‌, ‘ಅಂತರರಾ ಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿ ಯಂ ಉತ್ಪನ್ನಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. 
 
ಆದರೆ, ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಮಾಡಿಲ್ಲ. ಪರಿಣಾಮವಾಗಿ ಜನರು ಅತಿ ಯಾದ ಆರ್ಥಿಕ ಹೊರೆ ಅನುಭವಿಸುವಂತಾಗಿದೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ದುಪ್ಪಟ್ಟು ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ತಳೆದಿರುವ ನಿಲುವಿನಿಂದಾಗಿ ಸಾರಿಗೆ, ನಿತ್ಯ ಬಳಕೆ ವಸ್ತುಗಳು, ತರಕಾರಿ ಸೇರಿ ದಂತೆ ಎಲ್ಲ ವಸ್ತುಗಳ ದರವೂ ಏರಿಕೆಯಾಗಿದೆ’ ಎಂದರು.
 
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಹಂತ ಹಂತವಾಗಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಸಂಪೂರ್ಣ ವಾಗಿ ರದ್ದುಮಾಡಲು ಹೊರಟಿರುವ ಮುನ್ಸೂಚನೆ ಕಾಣುತ್ತಿದೆ. ತುಂಬೆ ಅಣೆ ಕಟ್ಟೆಯಲ್ಲಿ ಮಂಗಳೂರು ನಗರದ ಬೇಡಿಕೆ ಪೂರೈಸುವಷ್ಟು ನೀರಿನ ಸಂಗ್ರಹವಿದೆ.
 
ಆದರೆ, ನೀರಿನ ಕೊರತೆಯ ನೆಪ ವೊಡ್ಡಿ ನಗರದ ಜನರಲ್ಲಿ ಆತಂಕ ಸೃಷ್ಟಿ ಲಾಗುತ್ತಿದೆ. ನೀರಿನ ಕೊರತೆಯ ನೆಪದಲ್ಲಿ ಸರ್ಕಾರದ ಹಣವನ್ನು ಲೂಟಿ ಮಾಡಲು ಕಾಂಗ್ರೆಸ್‌ ನೇತೃತ್ವದ ಪಾಲಿಕೆ ಆಡಳಿತ ಮುಂದಾಗಿದೆ. ವಿರೋಧ ಪಕ್ಷವಾದ ಬಿಜೆಪಿ ಇದಕ್ಕೆ ಸಹಕಾರ ನೀಡುತ್ತಿದೆ ಎಂದು ಆರೋಪಿಸಿದರು.
 
ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ‘ಮೋದಿ ಅವರು ಅಚ್ಛೆ ದಿನಗಳ ಹೆಸರಿ ನಲ್ಲಿ ಅಧಿಕಾರಕ್ಕೆ ಬಂದು ಜನರಿಗೆ ಮೋಸ ಮಾಡಿದ್ದಾರೆ. ಅವರ ಆಡಳಿತ ದಲ್ಲಿ ದೇಶದ ಜನರಿಗೆ ಒಳ್ಳೆಯ ದಿನಗಳು ಇನ್ನೂ ಬರಲಿಲ್ಲ. ಮುಖ್ಯಮಂತ್ರಿ ಸಿದ್ದರಾ ಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರಿಗೆ ಮೋಸ ಮಾಡುತ್ತಿದೆ. ಬಿಜೆಪಿ, ಕಾಂಗ್ರೆಸ್‌ ಎರಡೂ ಪಕ್ಷಗಳನ್ನು ನಂಬಲಾರದ ಸ್ಥಿತಿ ಇದೆ’ ಎಂದರು.
 
ಸಿಪಿಎಂ ಜಿಲ್ಲಾ ಘಟಕದ ಕಾರ್ಯ ದರ್ಶಿ ವಸಂತ ಆಚಾರಿ, ಮುಖಂಡರಾದ ಯೋಗೀಶ್ ಜಪ್ಪಿನಮೊಗರು, ಜಯಂತಿ ಬಿ., ಸಂತೋಷ್ ಶಕ್ತಿನಗರ, ಭಾರತಿ ಬೋಳಾರ್, ಸಾದಿಕ್ ಕಣ್ಣೂರು, ದಿನೇಶ್ ಶೆಟ್ಟಿ, ಸುರೇಶ್ ಬಜಾಲ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT