ನಿಷೇಧದ ಕಾರಣ ಮೆಸ್ಸಿ ಅವರು ಬೊಲಿವಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಅರ್ಜೆಂಟೀನಾ ತಂಡ ಆಡಿರುವ 13 ಪಂದ್ಯಗಳಿಂದ 22 ಪಾಯಿಂಟ್ಸ್ ಕಲೆಹಾಕಿದ್ದು ಗುಂಪಿನ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಗುಂಪಿನಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳು ಮುಂದಿನ ವರ್ಷ ನಡೆಯುವ ವಿಶ್ವಕಪ್‌ಗೆ ಅರ್ಹತೆ ಗಳಿಸಲಿವೆ.