ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌: ಕೆಲ ಪಂದ್ಯಗಳಿಗೆ ವಿರಾಟ್‌ ಕೊಹ್ಲಿ ಅಲಭ್ಯ

Last Updated 28 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಧರ್ಮಶಾಲಾ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು 10ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐಪಿಎಲ್‌) ಆರಂಭದ ಕೆಲ ಪಂದ್ಯ ಗಳಲ್ಲಿ ಆಡುವುದು ಅನುಮಾನ ಅನಿಸಿದೆ.

ರಾಂಚಿಯಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ ಪಂದ್ಯದ ವೇಳೆ ಫೀಲ್ಡಿಂಗ್‌ ಮಾಡುವಾಗ ಕೊಹ್ಲಿ ಬಲಗೈಗೆ ಗಾಯಮಾಡಿಕೊಂಡಿದ್ದರು.
ಇದರಿಂದ ಪರಿಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರು ನಾಲ್ಕನೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

‘ಇನ್ನೂ ನೋವು ಕಡಿಮೆಯಾಗಿಲ್ಲ. ಪೂರ್ಣವಾಗಿ ಗುಣಮುಖನಾಗಲು  ಕೆಲ ವಾರ ಬೇಕಾಗಬಹುದು. ಅಲ್ಲಿಯವರೆಗೂ ಯಾವುದೇ ಪಂದ್ಯ ಆಡಲು ಆಗುವುದಿಲ್ಲ’ ಎಂದು ವಿರಾಟ್‌ ನಾಲ್ಕನೇ ಪಂದ್ಯದ ಬಳಿಕ ತಿಳಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್‌ ಐಪಿಎಲ್‌ನ ಚೊಚ್ಚಲ ಆವೃತ್ತಿ ಯಲ್ಲಿ ಒಂದು ಪಂದ್ಯಕ್ಕೆ ಅಲಭ್ಯರಾಗಿದ್ದರು. ಆ ಬಳಿಕ ಅವರು ಎಲ್ಲಾ ಆವೃತ್ತಿಗಳಲ್ಲೂ ಆಡಿದ್ದರು.

10ನೇ ಆವೃತ್ತಿಯ ಟೂರ್ನಿ ಏಪ್ರಿಲ್‌ 5ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹೋದ ಬಾರಿಯ ರನ್ನರ್ಸ್‌ ಅಪ್‌ ಆರ್‌ಸಿಬಿಗೆ ಹಾಲಿ ಚಾಂಪಿಯನ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಸವಾಲು ಎದುರಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT