ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗದ ನಂಬಿಕೆ ಬಂದರೆ ಕನ್ನಡ ಅಭಿವೃದ್ಧಿ’

Last Updated 28 ಮಾರ್ಚ್ 2017, 19:51 IST
ಅಕ್ಷರ ಗಾತ್ರ

ಹೊಸಕೋಟೆ: ‘ಕನ್ನಡದಲ್ಲಿ ಓದಿದವರಿಗೆ ಗೌರವ, ಉದ್ಯೋಗ ಸಿಗುವ ನಂಬಿಕೆ ಬಂದರೆ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ’ ಎಂದು ಡಾ.ಕೆ.ಕೃಷ್ಣಪ್ಪ ಹೇಳಿದರು.

ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಆರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಬದುಕು ಕಟ್ಟಿಕೊಳ್ಳುವ ಸಲುವಾಗಿಯೇ ಕನ್ನಡಿಗರು ಆಂಗ್ಲಭಾಷೆಯತ್ತ ವಾಲುತ್ತಿದ್ದಾರೆ. ಆ ಭಯ ನಿವಾರಣೆ ಆಗುವ ವಾತಾವರಣ ನಮ್ಮಲ್ಲಿ ನಿರ್ಮಾಣವಾಗಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿದರು. ಸಮ್ಮೇಳನ ಉದ್ಘಾಟಿಸಿದ ಶಾಸಕ ಎನ್.ನಾಗರಾಜು, ‘ಕನ್ನಡಿಗರು ಒಗ್ಗಟ್ಟಾಗಿ ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಕಾರ್ಯ ಮಾಡಬೇಕು. ಆಗ ಮಾತ್ರ ಕನ್ನಡ ಅಭಿವೃದ್ಧಿ ಸಾಧ್ಯ’ ಎಂದರು.

ತಾಲ್ಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಪ್ಪ ಕಂಬಳಿ, ಜಿಲ್ಲಾ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹುಲಿಕಲ್ ನಟರಾಜ್ ಇದ್ದರು. ಗ್ರಾಮದ ಮುಖ್ಯ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಸಿ ನಂತರ ವೇದಿಕೆಗೆ ಕರೆ ತರಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT