ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ ನಿರ್ಮೂಲನೆಗೆ ಸಂಕಲ್ಪ ಮಾಡಿ

Last Updated 6 ಏಪ್ರಿಲ್ 2017, 11:44 IST
ಅಕ್ಷರ ಗಾತ್ರ

ಕೋಲಾರ: ‘ಬಾಲ್ಯವಿವಾಹ ಪದ್ಧತಿಯು ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಎಸ್. ಮಹಾಲಕ್ಷ್ಮಿ ನೇರಳೆ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ  ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗ ದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂ ಡಿದ್ದ ಬಾಲ್ಯವಿವಾಹ ತಡೆ ಮತ್ತು ‘ಶಾಲೆ ಕಡೆ ನನ್ನ ನಡೆ’ ಜಾಗೃತಿ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು.

‘ಪೋಷಕರು ಹೆಣ್ಣು ಮಕ್ಕಳಿಗೆ ಬಾಲ್ಯ ದಲ್ಲೇ ವಿವಾಹ ಮಾಡುವ ಮೂಲಕ ಅವರ ಜೀವನವನ್ನು ಚಿವುಟಿ ಹಾಕುತ್ತಿ ದ್ದಾರೆ. ಪೋಷಕರು ಬಾಲ್ಯವಿವಾಹಕ್ಕೆ ಕಡಿವಾಣ ಹಾಕಿ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಹೆಣ್ಣು ಶಿಕ್ಷಣ ಪಡೆದರೆ ಸ್ವಾವಲಂಬಿಯಾಗಿ ಸಮಾಜದಲ್ಲಿ ಗೌರವಯುತ ಜೀವನ ನಡೆ ಸಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.

‘ಬಾಲ್ಯ ವಿವಾಹಗಳು ಕೇವಲ ಜಿಲ್ಲೆ ಯಲ್ಲಿ ಮಾತ್ರ ನಡೆಯುತ್ತಿಲ್ಲ. ದೇಶದೆಲ್ಲೆಡೆ ಇದು ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಬಾಲ್ಯವಿವಾಹದಿಂದ ಹೆಣ್ಣು ಮಕ್ಕಳು ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಸಂಗತಿ ಯನ್ನು ಪೋಷಕರು ಅರಿತು ಹೆಣ್ಣು ಮಕ್ಕಳನ್ನು ಬಾಲ್ಯದಲ್ಲೇ ಮದುವೆ ಮಾಡ ದೆ ಅವರನ್ನು ಸುಶಿಕ್ಷಿತರಾಗಿ ಮಾಡ ಬೇಕು’ ಎಂದು ಕಿವಿಮಾತು ಹೇಳಿದರು.

‘ಹೆಣ್ಣು ಮಕ್ಕಳು ಶಾಲೆಗೆ ಹೋದರೆ ಏನಾದರೂ ಸಾಧನೆ ಮಾಡಲು ಸಾಧ್ಯ. ಪೋಷಕರು ಹೆಣ್ಣು ಮಕ್ಕಳನ್ನು ಕಡೆಗಣಿಸದೆ ಕಡ್ಡಾಯವಾಗಿ ಅವರಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣ ಪಡೆದ ಮಹಿಳೆಯರು ವಿವಿದ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಉದಾಹರಣೆಗಳು ಸಾಕಷ್ಟಿವೆ. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹುದ್ದೆಯನ್ನು ಮಹಿಳೆಯರೇ ಅಲಂಕರಿಸಿರುವುದು ಇದಕ್ಕೆ ಉತ್ತಮ ನಿದರ್ಶನ’ ಎಂದರು.

‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಂವಿಧಾನಬದ್ಧ ಹಕ್ಕು. 14 ವರ್ಷದೊಳಗಿನ ಮಕ್ಕಳು ಶಾಲೆ ಬಿಟ್ಟು ಕೆಲಸ ಮಾಡುತ್ತಿದ್ದರೆ ಪ್ರಜ್ಞಾವಂತರು ಅವರನ್ನು ಶಾಲೆಗೆ ಸೇರಿಸಬೇಕು. ಇಲ್ಲವೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಅಧಿಕಾರಿಗಳು ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರಬೇಕು’ ಎಂದು ಹೇಳಿದರು.


ಜಾಗೃತಿ ಆಂದೋಲನ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ್ ಶಿರೋಳ್ ಮಾತನಾಡಿ, ‘ಬಾಲ್ಯವಿವಾಹವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಏ.12ರವರೆಗೆ ಜಾಗೃತಿ ಆಂದೋಲನ ನಡೆಸಲಾಗುತ್ತದೆ. ಅಲ್ಲದೇ, ಬೀದಿ ನಾಟಕಗಳ ಮೂಲಕ ಜನರಿಗೆ ಅರಿವು ಮೂಡಿಸಲಾಗುತ್ತದೆ’ ಎಂದು ವಿವರಿಸಿದರು.

ಈ ನೆಲ ಈ ಜಲ ಜಾನಪದ ಸಾಂಸ್ಕೃತಿಕ ಸಂಸ್ಥೆ ಸದಸ್ಯರು ಬಾಲ್ಯ ವಿವಾಹ ತಡೆ ಕುರಿತು ನಗರದ ವಿವಿಧೆಡೆ ಬೀದಿ ನಾಟಕ ಪ್ರದರ್ಶಿಸಿದರು. ಜತೆಗೆ ಪ್ರಮುಖ ರಸ್ತೆಗಳಲ್ಲಿ ಕಾಲೇಜು ವಿದ್ಯಾರ್ಥಿ ನಿಯರು ಜಾಗೃತಿ ಜಾಥಾ ನಡೆಸಿದರು.

ನ್ಯಾಯಾಧೀಶರಾದ ಕೆ.ಸುಬ್ರಹ್ಮಣ್ಯ, ಎನ್.ವಿ.ವಿಜಯ್, ಎಸ್.ವಿ.ಶ್ರೀಕಾಂತ್, ಪ್ರಶಾಂತ್ ಗಣಪತಿ, ಎಸ್.ಚಿನ್ನಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ನಿರಂಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ಭಾಸ್ಕರ್, ಸಿಡಿಪಿಒ ಕಿರಣ್, ಜಾಗೃತಿ ಸೇವಾ ಸಂಸ್ಥೆ ಅಧ್ಯಕ್ಷ ಧನರಾಜ್,  ಉಪ ನ್ಯಾಸಕಿ ವಿನುತಾ, ಜಿಲ್ಲಾ ಮಕ್ಕಳ ರಕ್ಷಣಾ ಧಿಕಾರಿ ಮಹೇಶ್‌ಬಾಬು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ರಾಮಕೃಷ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT