ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

400 ಮಂದಿ ನೇತ್ರದಾನಕ್ಕೆ ಸಮ್ಮತಿ

Last Updated 7 ಏಪ್ರಿಲ್ 2017, 6:23 IST
ಅಕ್ಷರ ಗಾತ್ರ

ಹಿರಿಯಡಕ: ‘ಪ್ರತಿಯೊಂದು ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಕ್ರಿಯಾಶೀಲ ಅಧ್ಯಾಪಕರ ವೃಂದ ಹಾಗೂ ಶಿಸ್ತನ್ನು ಅಳವಡಿಸಿಕೊಂಡು ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಮುಖ್ಯ’ ಎಂದು ಶಾಸಕ ವಿನಯ ಕುಮಾರ್ ಸೊರಕೆ ಅಭಿಪ್ರಾಯಪಟ್ಟರು.

ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾ ರಂಭ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಸಮಾರೋಪ ಭಾಷಣ ಮಾಡಿದ ಸಾಹಿತಿ ದುಂಡಿರಾಜ್ ‘ಕಾಲೇಜಿನ ದಿನಗಳು ಕವನಗಳ ಹುಟ್ಟಿಗೆ ಮೂಲ. ವಿದ್ಯಾರ್ಥಿ ಗಳು ತಮ್ಮ ಶೈಕ್ಷಣಿಕ ಕಲಿಕೆಯ ಜತೆ ಜತೆಗೆ ಸಾಹಿತ್ಯ ಬರವಣಿಗೆಯಲ್ಲಿ ತೊಡಗಿಸಿ ಕೊಂಡಾಗ ತಮ್ಮ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದರು.

(ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ರಜತ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. (ಪಡುಬಿದ್ರಿ ಚಿತ್ರ))

ಕಾಲೇಜಿನಲ್ಲಿ ಆರಂಭಿಸಿದ ವಾರ್ತಾಪತ್ರಿಕೆ ‘ಚಿಗುರು’ ಇದರ ಮೊದಲ ಸಂಚಿಕೆಯನ್ನು ಡುಂಡಿರಾಜ್ ಬಿಡುಗಡೆಗೊಳಿಸಿದರು. 

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿಕ್ಷಕ ಮೋಹನ್ ಕಡಬ ಹಾಗೂ ಮನದ ಮಾತು ಟೆಲಿಫಿಲ್ಮ್‌ನಲ್ಲಿನ ಅಭಿಯಾನ ಕ್ಕಾಗಿ ಶ್ರೇಷ್ಠ ನಟಿ ಪ್ರಶಸ್ತಿ ಪಡೆದ ಉಪನ್ಯಾಸಕಿ ಸುಜಾತ ಕುಮಾರಿ ಬಿ.ಇವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ  ಸೋಜನ್ ಕೆ.ಜಿ. ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ  ಚಂದ್ರಿಕಾ ರಂಜನ್ ಕೇಲ್ಕರ್, ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ವಿ. ಆಚಾರ್ಯ ಹಾಗೂ ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲಕಿ ಆಶಾ ಬಾರಕೂರು ಸ್ವಾಗತಿಸಿ, ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಸುಜಿತ್ ಕುಮಾರ್ ವಂದಿಸಿದರು. ಕನ್ನಡ ಉಪನ್ಯಾಸಕ ರವಿಚಂದ್ರ ಬಾಯರಿ ಕೊಕ್ಕರ್ಣೆ ಕಾರ್ಯಕ್ರಮ ನಿರೂಪಿಸಿದರು.

ನೇತ್ರದಾನ: ಕಾಲೇಜಿನಲ್ಲಿ ಆಯೋಜಿಸಲಾದ ನೇತ್ರದಾನ ಅಭಿಯಾನದಲ್ಲಿ 400 ನೇತ್ರದಾನಿಗಳ ವಿವರವನ್ನು ಒಳಗೊಂಡ ಅರ್ಜಿಯನ್ನು ಪ್ರಸಾದ್ ನೇತ್ರಾಲಯದ ನೇತ್ರ ತಜ್ಞರಾದ ಡಾ.ಶಮಂತ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT