ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿಯಾಗದ ಮಹಿಳೆಗೆ ತಾಯ್ತನ ಭಾಗ್ಯ!

Last Updated 7 ಏಪ್ರಿಲ್ 2017, 6:52 IST
ಅಕ್ಷರ ಗಾತ್ರ

ಶೃಂಗೇರಿ: ಗರ್ಭಿಣಿಯಾಗದ ಮಹಿಳೆ ಯಿಂದ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯ ವೈದ್ಯಾಧಿಕಾರಿಗಳು ವೈದ್ಯರು ಲಂಚ ಪಡೆದುಕೊಂಡು ಹೆರಿಗೆ ಪ್ರಮಾಣ ಪತ್ರ ನೀಡಿದ ಪ್ರಕರಣ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಮಾಸಿಕ ಸಭೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.

‘ಸುಳ್ಳು ದಾಖಲೆ ಸೃಷ್ಟಿಸಿದ ವೈದ್ಯಾಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಶಂಕರ್ ಆಗ್ರಹಿಸಿದರು. ಚರ್ಚೆ ನಡೆದ ಸಮಯದಲ್ಲಿ ವೈದ್ಯಾಧಿಕಾರಿ ಗೈರು ಹಾಜರಾಗಿದ್ದರಿಂದ ಸರ್ಕಾರಿ ಅಸ್ಪತ್ರೆಯ ನರ್ಸ್‌ಗೆ ಈ ವಿಷಯ ತಿಳಿಸಿದರು.

‘ಶೃಂಗೇರಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟು ಇದ್ದು, ತೋಟದ ಬೆಳೆಗಳು ನಾಶವಾಗುತ್ತಿವೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚು ತ್ತಿದ್ದು, ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡದಿರುವುದು ವಿಷಾದ ನೀಯ ಸಂಗತಿ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶೀಲ ಚಂದ್ರಶೇಖರ್ ಹೇಳಿದರು.

‘ಎರಡು ತಿಂಗಳ ಹಿಂದೆ ಕಂದಾಯ ಇಲಾಖೆಗೆ ಕುಡಿಯುವ ನೀರಿಗಾಗಿ ₹60 ಲಕ್ಷ ಬಂದಿದ್ದರೂ ಅದನ್ನು ತಾಲ್ಲೂಕು ದಂಡಾಧಿಕಾರಿಗಳು ಯಾವುದೇ ಸಭೆ ಯನ್ನು ಈವರೆಗೆ ಕರೆದಿಲ್ಲ. ಈಗಾಗಲೇ ತಾಲ್ಲೂಕಿನ ಹಳ್ಳ, ಕೊಳ್ಳ, ಬಾವಿಗಳು ಬಿಸಿಲಿನ ಬೇಗೆಗೆ ತಳಕಂಡಿದ್ದು, ಕಂದಾಯ ಇಲಾಖೆಯವರು ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾಹಿತಿಯನ್ನು ಕೂಡಲೇ ಪಡೆಯ ಬೇಕು. ಸರ್ಕಾರದಿಂದ ಬಂದ ಹಣವನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಕೂಡಲೇ ಕಾರ್ಯ ಪ್ರವೃತ್ತರಾ ಗಬೇಕು’ ಎಂದು ಕಂದಾಯ ಇಲಾಖೆ ಅಧಿಕಾರಿ ಷಣ್ಮುಖ ಅವರಿಗೆ ಜಯಶೀಲ ತಾಕೀತು ಮಾಡಿದರು.

‘ಕಂದಾಯ ಇಲಾಖೆಯವರು ಸಕಾಲಕ್ಕೆ ಜಾತಿ ದೃಢೀಕರಣ ಪತ್ರ ನೀಡ ಬೇಕು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಪ್ರಮಾಣ ಪತ್ರ ನೀಡಬೇಕು. ಆದರೆ ತಹಶೀಲ್ದಾರ್‌ ಪದ್ಮನಾಭಶಾಸ್ತ್ರಿ ಅವರು, ಜಾತಿ ಪ್ರಮಾಣಪತ್ರ ನೀಡಲು ಸಾಕಷ್ಟು ವಿಳಂಬ ಮಾಡುತ್ತಿದ್ದು, ಇದರಿಂದ ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾ ಗಬೇಡಿ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಶಂಕರ್ ಕಂದಾಯ ಇಲಾಖೆಗೆ ಎಚ್ಚರಿಸಿದರು.

‘ತಾಲ್ಲೂಕಿನ ಕಸಬಾ ಹೋಬಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಶಾಲೆ ಮಂಜೂರಾಗಿದ್ದು, 6ನೇ ತರಗತಿಯ 50 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸ ಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಡಿ.ರೇವಣ್ಣ ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ವಿದ್ಯಾರ್ಥಿಗಳ ಅನುಕೂಲತೆಗಾಗಿ ಕೂಡಲೇ ಬಾಡಿಗೆ ಕಟ್ಟಡವನ್ನು ಒದಗಿ ಸುವ ಬಗ್ಗೆ ಭರವಸೆ ನೀಡಿದರು. ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡ ಗಳಲ್ಲಿ ಕಾರ್ಯ ನಿರ್ವಹಿಸುವ ಬದಲು ಸರ್ಕಾರಿ ಇಲಾಖೆಯ ಕಚೇರಿಗಳನ್ನು ಬಳಸಿಕೊ ಳ್ಳಬೇಕು’ ಎಂದು ಸಭೆಗೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಮತಿ ತಿಮ್ಮಪ್ಪ ಮಾತನಾಡಿ, ‘ಗೋಚವಳ್ಳಿಯ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ಕುಸಿದಿದ್ದು ಟಾರ್ಪಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದರಿಂದ ಪುಟ್ಟ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಆದಷ್ಟು ಬೇಗ ಕಟ್ಟಡ ದುರಸ್ತಿ ಮಾಡಿಸಿಕೊಡಿ’ ಎಂದು ಸಿಡಿಪಿಒ ಉಮೇಶ್ ಅವರಿಗೆ ಆದೇಶ ನೀಡಿದರು.

‘ಮಳೆ ಕಡಿಮೆ ಇರುವುದರಿಂದ ತೋಟದ ಬೆಳೆಗಳಿಗೆ ಮೇಲು ಹೊದಿಕೆ ಯಾಗಿ ಸಾವಯವ ಗೊಬ್ಬರವನ್ನು ಬಳಸಬೇಕು.ಆಗ ತೇವಾಂಶ ಉಳಿದು ಬೆಳೆ ನಾಶವಾಗುವುದು  ಕಡಿಮೆಯಾ ಗುತ್ತದೆ. ಇಲಾಖೆಯಿಂದ ಜೈವಿಕ ಶಿಲೀಂದ್ರ ನಾಶಕಗಳನ್ನು ರೈತರಿಗೆ ಉಚಿತ ವಾಗಿ ವಿತರಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಕೃಷ್ಣ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಅಂಬ್ಲೂರು ರಾಮಕೃಷ್ಣ, ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ ಹಾಜರಿದ್ದರು.

***

ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿಯಾಗಿ ಆಹಾರ ಧಾನ್ಯಗಳು ನೀಡುತ್ತಿದ್ದು, ಅವುಗಳು ಬೇಗನೆ ಕೆಡುತ್ತಿವೆ. ಆದ್ದರಿಂದ ಮಕ್ಕಳಿಗೆ ಅಗತ್ಯವಿರುವಷ್ಟನ್ನು ನೀಡಿ.
-ಶಿಲ್ಪಾ ರವಿ
ಜಿಲ್ಲಾ ಪಂಚಾಯಿತಿ ಸದಸ್ಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT