ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ವ್ಯಾಪಾರಿಗಳ ಅಂಗಡಿ ತೆರವು

Last Updated 7 ಏಪ್ರಿಲ್ 2017, 10:07 IST
ಅಕ್ಷರ ಗಾತ್ರ

ಗುಡಿಬಂಡೆ: ಪಟ್ಟಣದ ಮುಖ್ಯ ರಸ್ತೆಯ ಅಕ್ಕ-ಪಕ್ಕದಲ್ಲಿರುವ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ಸ್ಥಳೀಯ ಪಟ್ಟಣ ಪಂಚಾಯತಿ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಬುಧವಾರ ತೆರವುಗೊಳಿಸಿದರು.

ಇದಕ್ಕೆ ಪಟ್ಟಣದ 2ನೇ ವಾರ್ಡಿನ ಸದಸ್ಯೆ ಲಕ್ಷ್ಮಿಕಾಂತಮ್ಮ  ಖಂಡಿಸಿ, ಪಟ್ಟಣದಲ್ಲಿ ಬಹಳಷ್ಟು ಜನರು ಬಡವರಿದ್ದಾರೆ. ತಮ್ಮ ಜೀವನೋಪಾಯಕ್ಕಾಗಿ ಕೆಲವರು ತಳ್ಳುವ ಗಾಡಿಗಳಲ್ಲಿ ಹಣ್ಣು, ಹೂವು, ಬಳೆ ವ್ಯಾಪಾರ ವ್ಯಾಪಾರ ಮಾಡುತ್ತಿದ್ದಾರೆ. ಇವರಿಗೆ ಪಟ್ಟಣ ಪಂಚಾಯತಿ ವತಿಯಿಂದಲೇ ಗುರುತಿನ ಚೀಟಿ ನೀಡಿ ನಿತ್ಯ ₹ 10 ರಿಂದ ₹ 20 ಕರ ಸಹ ವಸೂಲಿ ಮಾಡುತ್ತಿದ್ದಾರೆ. ಆದರೆ ಏಕಾಏಕಿ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಂಗಡಿಗಳನ್ನು ತೆರವುಗೊಳಿಸುವುದು ಸರಿಯಲ್ಲ ಎಂದು ತಿಳಿಸಿದರು.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್ ಕುಮಾರ್ ಮಾತನಾಡಿ, ಇತ್ತೀಚಿಗೆ ತಾಲ್ಲೂಕು ಕಚೇರಿ ಆವರಣದಲ್ಲಿ ಅಳವಡಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತರಲು ಹೋಗುವ ಸಾರ್ವಜನಿಕರಿಗೆ ಹಣ್ಣಿನ ಅಂಗಡಿ ಅಡ್ಡವಾಗಿದೆ ಎಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಅಂಗಡಿ ತೆರವುಗೊಳಿಸಲಾಗುತ್ತಿದೆ.  ಇದರಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳ ಪ್ರಭಾವವಿಲ್ಲ ಎಂದು ಸ್ಪಷ್ಟನೆ ನೀಡಿದರು.

**

ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ನನ್ನ ಅಂಗಡಿ ತೆರವು ಗೊಳಿಸಿದ್ದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ

–ಆನಂದ್, ಬೀದಿ ವ್ಯಾಪಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT