ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಸಮುದಾಯ ಭವನ

Last Updated 10 ಏಪ್ರಿಲ್ 2017, 4:46 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಸರ್ಕಾರ ಬಿಡುಗಡೆ ಮಾಡಿರುವ ₹ 1 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯ ಭವನವನ್ನು ನಿರ್ಮಿಸಿಲಾಗುತ್ತದೆ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾ ಮುಖಂಡ ಮುಗಿಲಡಿಪಿ ನಂಜಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ನಗರದ ಮಯೂರ ಸರ್ಕಲ್‌ ಬಳಿಯಿರುವ ವಾಲ್ಮೀಕಿ ದೇವಸ್ಥಾನದ ಬಳಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು ಏಪ್ರಿಲ್‌ 13ರಂದು ಭೂಮಿ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಭೂಮಿ ಪೂಜೆಯಂದು ಪ್ರಸನ್ನಾನಂದ ಸ್ವಾಮೀಜಿ ಅವರನ್ನು ನಗರದ ಬಸ್‌ ನಿಲ್ದಾಣದಿಂದ ವಿವಿಧ ಕಲಾ ತಂಡಗಳೊಡನೆ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದು ಹೇಳಿದರು.

ಭವನ ನಿರ್ಮಾಣಕ್ಕೆ ಶಾಸಕ ಎಂ.ರಾಜಣ್ಣ ಮತ್ತು ಸಂಸದ ಕೆ.ಎಚ್‌.ಮುನಿಯಪ್ಪ ಅನುದಾನ ದೊರಕಿಸಿಕೊಡಲು ಪ್ರಮುಖ ಪಾತ್ರ ವಹಿಸಿದ್ದಾರೆ. ಜೆಡಿಎಸ್‌ ಮುಖಂಡ ಮೇಲೂರು ಬಿ.ಎನ್‌.ರವಿಕುಮಾರ್‌ ನಿವೇಶನ ಖರೀದಿಸಿ ಕೊಟ್ಟು ಸಮುದಾಯ ಭವನ ನಿರ್ಮಾಣಕ್ಕೆ ನೆರವಾಗಿದ್ದಾರೆ ಎಂದು ತಿಳಿಸಿದರು.

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ರಾಮಚಂದ್ರಪ್ಪ, ರಾಜೇಂದ್ರ, ಕೆ.ಪಿ.ನಟರಾಜ್‌, ಕೆ.ಬಿ.ಮಂಜುನಾಥ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT