ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುನ್ಮಾನ ಮತಯಂತ್ರ ಬಳಕೆಗೆ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯಿಲಿ ಒಲವು

Last Updated 12 ಏಪ್ರಿಲ್ 2017, 10:59 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಬೇಡ ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯಿಲಿ ಭಿನ್ನ ನಿಲುವು ಪ್ರಕಟಿಸಿದ್ದಾರೆ.

ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ಅವರು ವಿದ್ಯುನ್ಮಾನ ಮತಯಂತ್ರ ಬಳಕೆ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸುವುದರ ಜತೆಗೆ ವಿದ್ಯುನ್ಮಾನ ಮತಯಂತ್ರಗಳ ಸಹಾಯದಿಂದ ಅಕ್ರಮ ಎಸಗಲಾಗಿದೆ ಎಂಬ ಆರೋಪಗಳ ಬಗ್ಗೆ ಉನ್ನತ ಸಮಿತಿಯಿಂದ ತನಿಖೆ ನಡೆಸುವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

‘ಮತ್ತೆ ಮತಪತ್ರ ಬಳಕೆಗೆ ಮನ ಮಾಡುವುದು ಪ್ರಗತಿಪರ ನಿಲುವಲ್ಲ. ನಾವು ಹಿಂದಕ್ಕೆ ಹೋಗಬೇಕಾಗಿಲ್ಲ’ ಎಂದು ಮೊಯಿಲಿ ಹೇಳಿದ್ದಾರೆ.

‘ನಾವು ಅಧಿಕಾರದಲ್ಲಿದ್ದಾಗಲೇ ವಿದ್ಯುನ್ಮಾನ ಮತಯಂತ್ರಗಳ ಬಳಕೆಯನ್ನು ಅನುಷ್ಠಾನಗೊಳಿಸಲಾಗಿತ್ತು. ನಾವು ಜಾರಿಗೊಳಿಸಿದ ವ್ಯವಸ್ಥೆಯನ್ನೇ ನಾವೀಗ ಪ್ರಶ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದ ಬಳಿಕ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ವಿದ್ಯುನ್ಮಾನ ಮತಯಂತ್ರದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದವು. ಅಲ್ಲದೆ, ಮುಂಬರುವ ಚುನಾವಣೆಗಳಲ್ಲಿ ಮತಪತ್ರ ಬಳಕೆ ಜಾರಿಗೆ ತರಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT