ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ವಿಜಯೋತ್ಸವ

Last Updated 14 ಏಪ್ರಿಲ್ 2017, 8:09 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.

ಪಟ್ಟಣದ ರಾಜ ಬೀದಿಯಲ್ಲಿ ಸಾಲು ಸಾಲು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜನರಿಗೆ ಸಿಹಿ ಹಂಚಿದರು. ಕಾಂಗ್ರೆಸ್‌ ಪಕ್ಷ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿ ಪರ ಘೋಷಣೆ ಕೂಗಿದರು. ಕಾಂಗ್ರೆಸ್‌ ಮಾಧ್ಯಮ ಘಕಟದ ಜಿಲ್ಲಾ ಸಂಚಾಲಕ ಎಂ. ಪುಟ್ಟೇಗೌಡ ಮಾತನಾಡಿ, ಕಾಂಗ್ರೆಸ್‌ ಪಕ್ಷಕ್ಕೆ ಶತಮಾನಗಳ ಇತಿಹಾಸ ಇದ್ದು, ಜನರ ನೋವಿಗೆ ಸ್ಪಂದಿಸುತ್ತಾ ಬಂದಿದೆ.

ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆಗಳು ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿವೆ. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ಮುಟ್ಟಿಸಬೇಕು. ಪಕ್ಷದ ಮಾಧ್ಯಮ ಘಟಕದಿಂದ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಲಾಗುವುದು. ಸ್ಥಳೀಯ ಮುಖಂಡರು ಇದಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಎಲ್‌. ಲಿಂಗರಾಜು ಮಾತನಾಡಿ, ಮಂಡ್ಯ ಜಿಲ್ಲೆ ಕಾಂಗ್ರೆಸ್‌ ಪಕ್ಷದ ಭದ್ರ ಕೋಟೆಯಾಗಿದ್ದು, ಮುಂದಿನ ವಿಧಾಸಭೆ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸಜ್ಜುಗೊಳಿಸಬೇಕು. ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಬೇಕು. ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎನ್‌. ಗಂಗಾಧರ್‌, ಟೌನ್‌ ಘಟಕದ ಅಧ್ಯಕ್ಷ ಎಸ್‌. ರಘು, ಮುಖಂಡರಾದ ಬ್ಯಾಂಕ್‌ ನಾರಾಯಣ, ನಗುವನಹಳ್ಳಿ ರಾಮಸ್ವಾಮಿಗೌಡ, ಬಳ್ಳೇಕೆರೆ ಸುರೇಂದ್ರ, ಕೆ. ಗೋಪಾಲಗೌಡ, ಎಪಿಎಂಸಿ ನಿರ್ದೇಶಕ ಎಂ.ಜೆ. ಪುಟ್ಟರಾಜು, ವಕೀಲರಾದ ಕೆ. ಕುಮಾರ್‌, ಎ. ಕುಮಾರ್‌, ದೊಡ್ಡಪಾಳ್ಯ ಶಿವಕುಮಾರ್‌, ಕೆ.ಶೆಟ್ಟಹಳ್ಳಿ ದೇವರಾಜು ಇತರರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT