ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಗೆಲುವು; ವಿಜಯೋತ್ಸವ

Last Updated 14 ಏಪ್ರಿಲ್ 2017, 8:16 IST
ಅಕ್ಷರ ಗಾತ್ರ

ಕುಶಾಲನಗರ: ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಕಾರಣ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದಲ್ಲಿ ಗುರು ವಾರ ವಿಜಯೋತ್ಸವ ಆಚರಿಸಲಾಯಿತು.

ಕಾಂಗ್ರೆಸ್‌ನ ನಗರ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಕಾರ್ಯಪ್ಪ ವೃತ್ತದಲ್ಲಿ ಸೇರಿದ ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದ ರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಪರವಾಗಿ ಘೋಷಣೆ ಕೂಗಿದರು.  ಪಟಾಕಿಸಿ ಸಿಡಿಸಿ ಸಿಹಿ ಹಂಚಿದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ಎಸ್.ಎನ್. ನರಸಿಂಹಮೂರ್ತಿ, ನಿರೀಕ್ಷೆ ಯಂತೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದ್ದು, ಮುಂದಿನ ಚುನಾ ವಣೆಗೆ ಕಾರ್ಯಕರ್ತರನ್ನು ಮತ್ತಷ್ಟು ಕೆಲಸ ಮಾಡಲು ಹುರಿ ದುಂಬಿಸಿ ದಂತಾಗಿದೆ ಎಂದು ಹೇಳಿದರು.

ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ಜಿ.ಮಂಜುನಾಥ್ ಗುಂಡೂರಾವ್, ಪ.ಪಂ.ಸದಸ್ಯರಾದ ಎಚ್.ಜೆ.ಕರಿಯಪ್ಪ, ಫಜಲುಲ್ಲಾಖಾನ್, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಬಿ.ಎ.ಅಬ್ದುಲ್ ಖಾದರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಎಪಿ ಎಂಸಿ ಮಾಜಿ ನಿರ್ದೇಶಕ ಎಂ.ವಿ.ಹರೀಶ್ ಮುಖಂಡರಾದ ದಯಾನಂದ ಹಾಗೂ ಸಣ್ಣಪ್ಪ ಮತ್ತಿತರರು ಇತರರು ಉಪಸ್ಥಿತರಿದ್ದರು.

ಐಎನ್‌ಟಿಯುಸಿ ವಿಜಯೋತ್ಸವ: ಸಮೀ ಪದ ಕೂಡಿಗೆ ವೃತ್ತದಲ್ಲಿ ಐಎನ್‌ಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ.ಹಮೀದ್ ನೇತೃತ್ವದಲ್ಲಿ ಸಂಘಟನೆಯ ಕಾರ್ಯ ಕರ್ತರು ವಿಜಯೋತ್ಸವ ಆಚರಿಸಿದರು.

ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ವಿ.ಸಣ್ಣಪ್ಪ, ಸಂಘಟನೆ ಕಾರ್ಯದರ್ಶಿ ಗೋವಿಂದ ರಾಜ್ ದಾಸ್ ಸೇರಿದಂತೆ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT