ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಆಯೋಗ ರಚಿಸಲು ಒತ್ತಾಯ

ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ನೌಕರರ ಪ್ರತಿಭಟನೆ
Last Updated 14 ಏಪ್ರಿಲ್ 2017, 9:05 IST
ಅಕ್ಷರ ಗಾತ್ರ

ಕಲಬುರ್ಗಿ: 2017ರ ಬಜೆಟ್‌ನಲ್ಲಿ ಘೋಷಿಸಿದಂತೆ ಏಪ್ರಿಲ್ ಒಳಗೆ ವೇತನ ಆಯೋಗ ರಚಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟದ ಜಿಲ್ಲಾ ಸಮಿತಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಿದರು.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವೇತನ ಆಯೋಗ ರಚಿಸಬೇಕು. ಈ ಆಯೋಗವು ಗರಿಷ್ಠ ಆರು ತಿಂಗಳ ಒಳಗೆ ತನ್ನ ವರದಿ ನೀಡಬೇಕು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆಗೆ ಒಳಗಾಗಿರುವ ಸರ್ಕಾರಿ ನೌಕರರಿಗೆ 2017ರ ಜನವರಿಯಿಂದ ಅನ್ವಯವಾಗುವಂತೆ ಶೇ 30ರಷ್ಟು ಮಧ್ಯಂತರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ಕಲಬುರ್ಗಿ ವಿಭಾಗದ ಜನರಿಗೆ ಅನುಕೂಲ ಕಲ್ಪಿಸಲು ಕಲಬುರ್ಗಿ ವಿಭಾಗಕ್ಕೆ ಮಂಜೂರಾಗಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಪೀಠವನ್ನು ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿದರು.

ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಕನಿಷ್ಠ ವೇತನ ಇಲ್ಲದೆ ನೌಕರರು ಪರದಾಡುವಂತಾಗಿದೆ. ಸಮರ್ಪಕ ವೇತನ ಇಲ್ಲದೆ ನೌಕರರು  ಕುಟುಂಬ ನಿರ್ವಹಣೆಗೆ ತೊಂದರೆ ಎದುರಿಸುವಂತಾಗಿದೆ. ಹೀಗಾಗಿ ಅವರಿಗೆ ಸೇವಾ ಭದ್ರತೆ ಒದಗಿಸಿ, ಸಮರ್ಪಕ ವೇತನ ನೀಡಲು ಕ್ರಮ ಕೈಗೊಳ್ಳಬೇಕು  ಎಂದು ಆಗ್ರಹಿಸಿದರು.

ಒಕ್ಕೂಟದ ಗೌರವ ಅಧ್ಯಕ್ಷ ಕೆ.ಪ್ರಕಾಶ, ಅಧ್ಯಕ್ಷ ಶರಣಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಡಾ. ಶರಣಪ್ಪ ಸೈದಾಪುರ, ಖಜಾಂಚಿ ಬಿ.ಎಸ್.ಬಾಗೋಡಿ ಸೇರಿದಂತೆ ವಿವಿಧೆಡೆಯ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT