ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಜನಪರ ಆಡಳಿತಕ್ಕೆ ಸಂದ ಜಯ: ಬೋಸರಾಜು

Last Updated 14 ಏಪ್ರಿಲ್ 2017, 9:21 IST
ಅಕ್ಷರ ಗಾತ್ರ

ಮಾನ್ವಿ: ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ನೀಡಿದ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕೆಲಸಗಳಿಗೆ ಮನ್ನಣೆ ನೀಡಿ ಗುಂಡ್ಲುಪೇಟೆ ಮತ್ತು ನಂಜನಗೂಡು ಮತದಾರರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿದ್ದಾರೆ ಎಂದು ವಿಧಾನ ಪರಿಸತ್‌ ಸದಸ್ಯ ಎನ್‌.ಎಸ್‌.ಬೋಸರಾಜು ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕಾರ್ಯಕ್ರಮಗಳನ್ನು ಸಹಿಸದೆ ಅಪಪ್ರಚಾರದಲ್ಲಿ ತೊಡಗಿದ್ದ ಬಿಜೆಪಿಗೆ ಉಪ ಚುನಾವಣೆ ಫಲಿತಾಂಶ ತಕ್ಕ ಪಾಠ ಕಲಿಸಿದೆ.

ಸರ್ವ ಧರ್ಮಗಳ ಜನರ ಹಿತಾಸಕ್ತಿ ಕಾಪಾಡುವ ಕಾಂಗ್ರೆಸ್ ಪಕ್ಷದ ಜಾತ್ಯತೀತ ಸಿದ್ಧಾಂತಗಳಿಗೆ ಜನತೆಯ ಬೆಂಬಲ ಸದಾ ಇರುತ್ತದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಶಾಸಕ ಜಿ.ಹಂಪಯ್ಯ ನಾಯಕ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಫೂರ ಸಾಬ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಇಲಿಯಾಸ್‌ ಖಾದ್ರಿ, ಎಪಿಎಂಸಿ ಅಧ್ಯಕ್ಷ ಬೀರಪ್ಪ ಕಡದಿನ್ನಿ ಇದ್ದರು.

ಸಿಂಧನೂರು ವರದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಿರುವುದಕ್ಕೆ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕ ಕಾರ್ಯಕರ್ತರು ಗುರುವಾರ ಸಂಭ್ರಮಾಚರಿಸಿದರು.

ಶಾಸಕ ಹಂಪನಗೌಡ ಬಾದರ್ಲಿ ನಿವಾಸದಿಂದ ನೂರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ಕನಕದಾಸ ವೃತ್ತ, ಸಾರ್ವಜನಿಕ ಆಸ್ಪತ್ರೆಯಿಂದ ಮಹಾತ್ಮಗಾಂಧಿ ವೃತ್ತಕ್ಕೆ ಬಂದು ಪಟಾಕಿ ಸಿಡಿಸಿ, ಸಿಹಿ ಹಂಚಿದರು.

ಕೆಪಿಸಿಸಿ ಸದಸ್ಯ ಎಂ.ಕಾಳಿಂಗಪ್ಪ ವಕೀಲ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಶರಣೇಗೌಡ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಬೀಸಾಬ, ಸದಸ್ಯ ನವಾಬ್, ಮುಖಂಡರಾದ ರಾಜುಗೌಡ ಬಾದರ್ಲಿ, ಸತ್ಯನಗೌಡ ವಳಬಳ್ಳಾರಿ, ಲಿಂಗಾಧರ, ದುರುಗಪ್ಪ ಕಟಾಲಿ, ಶಾಹೀನ್, ಶಾಮೀದ್, ಬಸವರಾಜ ಮುರಾರಿ, ಶ್ರೀದೇವಿ ಶ್ರೀನಿವಾಸ ಇದ್ದರು.

ಮಸ್ಕಿ ವರದಿ: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಗಳಿಸುತ್ತಿದ್ದಂತೆ ಗುರುವಾರ ಇಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕರ ಕಚೇರಿ ಮುಂದೆ ಸಿಹಿ ಹಂಚಿದರು.

ಪಕ್ಷದ ಮಸ್ಕಿ ಘಟಕದ ಅಧ್ಯಕ್ಷ ಅಂದಾನಪ್ಪ ಗುಂಡಳ್ಳಿ, ಡಾ. ಬಿ.ಎಚ್‌. ದಿವಟರ್‌, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ, ಯಲ್ಲೋಜಿರಾವ್‌ ಕೊರೆಕಾರ್‌, ಎಪಿಎಂಸಿ ನಿರ್ದೇಶಕ ಬಸ್ಸಪ್ಪ ಬ್ಯಾಳಿ, ಬಸನಗೌಡ ಪೊಲೀಸ್‌ ಪಾಟೀಲ, ಪುರಸಭೆ ಸದಸ್ಯರಾದ ಎಂ. ಅಮರೇಶ, ನೀಲಕಂಠಪ್ಪ ಭಜಂತ್ರಿ, ಸುರೇಶ ಹರಸೂರು, ರಂಗಪ್ಪ ಅರಕೇರಿ, ತಿಮ್ಮಣ್ಣ ಗುಡಿಸಲಿ, ಆನಂದ, ಶರಣಯ್ಯ ಸ್ವಾಮಿ, ಮಲ್ಲಯ್ಯ ಬಳ್ಳಾ, ಮಸೋದು ಪಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT