ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸ್ಥಾನದಲ್ಲಿರಿ; ತುರ್ತು ಚಿಕಿತ್ಸೆ ನೀಡಿ

ವೈದ್ಯರಿಗೆ ಖಡಕ್‌ ಸೂಚನೆ ನೀಡಿದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ
Last Updated 15 ಏಪ್ರಿಲ್ 2017, 5:18 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಗ್ರಾಮ, ತಾಲ್ಲೂಕು ಕೇಂದ್ರಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಜನರಿಗೆ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ಸಂಬಂಧಪಟ್ಟ ವೈದ್ಯರು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ 2016–-17ನೇ ಸಾಲಿನ ಮಾರ್ಚ್‌ ಮಾಹೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಭೀಕರ ಬರ ಇರುವ ಜತೆಗೆ ತೀವ್ರ ತಾಪಮಾನದಿಂದ ಜನರು ವಿವಿಧ ಕಾಯಿಲೆಗಳಿಗೆ ತುತ್ತಾಗಿ, ಆಸ್ಪತ್ರೆ ಗಳಿಗೆ ಬಂದಾಗ ತುರ್ತಾಗಿ ವೈದ್ಯರು ಸ್ಪಂದಿಸಬೇಕು ಎಂದರು.

ಜನರಿಗೆ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರು ಪೂರೈಸುವ ವಿಷಯದಲ್ಲಿ ನಿರ್ಲಕ್ಷ್ಯ ತೋರದಿರಲು ತಿಳಿಸಿದ ಅವರು, ಹಗಲಿರುಳು ಶ್ರಮಿಸಿ ಜನರಿಗೆ ತೊಂದರೆ ಯಾಗದಂತೆ ಗಮನ ನೀಡಬೇಕು ಎಂದೂ ಸೂಚಿಸಿದರು.

ವಿವಿಧ ಕಾಲುವೆಗಳಲ್ಲಿ ಬೆಳೆದಿರುವ ಗಿಡಗಂಟಿ ಗಳನ್ನು ತೆರವುಗೊಳಿಸಿ ಮುಂಬರುವ ದಿನಗಳಲ್ಲಿ ನೀರು ಸರಾಗ ವಾಗಿ ಹರಿಯಲು ಅನುವು ಮಾಡಿಕೊಡ ಬೇಕು. ಸ್ವಚ್ಛ ಭಾರತ ಮಿಷನ್ ಯೋಜನೆ ಯಡಿ ಶೌಚಾಲಯ ನಿರ್ಮಿಸಿಕೊಳ್ಳುವ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ ಸ್ವಚ್ಛ ಭಾರತ ಮಿಷನ್ ಯೋಜನೆ, ಸಸಿಗಳನ್ನು ಬೆಳೆ ಸುವ ಕುರಿತು ಸೂಕ್ತ ಜಾಗೃತಿ ಮೂಡಿ ಸುವ ಕಾರ್ಯ ಪ್ರತಿ ಸರ್ಕಾರಿ ಇಲಾಖೆ ಮೂಲಕ ನಡೆಯಬೇಕು. ಪ್ರತಿ ಇಲಾಖೆ ಗಳು ತಮ್ಮ ಕಚೇರಿ ವ್ಯಾಪ್ತಿಯಲ್ಲಿ ಬರುವ ಗೋಡೆಗಳ ಮೇಲೆ ಚಿತ್ರಕಲೆ ಮೂಲಕ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಯಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅರಣ್ಯ ಅಭಿವೃದ್ಧಿಗೆ ಮೀಸಲಿಡುವ ಶೇ 20ರಷ್ಟು ಅನುದಾನವನ್ನು ಇನ್ಮುಂದೆ ಅರಣ್ಯ ಇಲಾಖೆಯಿಂದಲೇ ಬಳಸಿ, ಈ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಸಿ ಗಳನ್ನು ಬೆಳೆಸುವ ಕಾರ್ಯ ಮಾಡಬೇಕು. ಅದರಂತೆ ವೃಕ್ಷ ಅಭಿಯಾನ ಎಲ್ಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬರ ನಿರ್ವಹಣೆಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾ ಗಿದ್ದು, ಆ ಎಲ್ಲ ಅಧಿಕಾರಿಗಳು ಪ್ರತಿ ವಾರ ಕ್ಕೊಮ್ಮೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಭೇಟಿ ನೀಡಿ ಕುಡಿಯುವ ನೀರು, ಮೇವಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದ ಅವರು, ಈ ಕುರಿತ ಅನುಸರಣಾ ವರದಿಯನ್ನು ಸಹ ತಮಗೆ ನೀಡುವಂತೆ ಸೂಚನೆ ನೀಡಿ, ಇಂದಿನ ಸಭೆಗೆ ಸಕಾರಣವಿಲ್ಲದೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸ ಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಶಿಷ್ಯ ವೇತನ ದೊರೆಯಲು ಅನುಕೂಲವಾಗು ವಂತೆ ಬ್ಯಾಂಕ್ ಖಾತೆಗೆ ಆಧಾರ್‌ ಜೋಡಣೆ ಕಾರ್ಯ ಪರಿಣಾಮಕಾರಿ ಯಾಗಿ ಮಾಡಬೇಕು. ಇದಕ್ಕೆ ತಪ್ಪಿದ್ದಲ್ಲಿ ಆಯಾ ಶಾಲೆಯ ಮುಖ್ಯಶಿಕ್ಷಕರನ್ನು ಹೊಣೆ ಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳ ಮೂಲಕ ಸಮರ್ಪಕ ಪಡಿತರ ವಿತರಣೆ, ವೃದ್ಧಾಪ್ಯ ವೇತನ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ವಿತರಣೆ, ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಮಂಜೂರಾಗಿರುವ 7 ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ತೀವ್ರ ತಾಪಮಾನದಿಂದ ಕಾಯಿಲೆಗೆ ತುತ್ತಾಗುವ ಜನರಿಗೆ ತುರ್ತು ಚಿಕಿತ್ಸಾ ಸೌಲಭ್ಯ ಒದಗಿಸುವುದು.

ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳ ಸೃಜನೆ, ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ, ನಿರುದ್ಯೋಗಿಗಳಿಗೆ ಸಾಲ-ಸೌಲಭ್ಯ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿ ಗಳಿಗೆ ಸೂಚಿಸಲಾಯಿತು.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಮುಖ್ಯ ಯೋಜನಾಧಿಕಾರಿ ದಶವಂತ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

*
ವೈದ್ಯರು, ಸಿಬ್ಬಂದಿ ಕೇಂದ್ರ ಸ್ಥಳದಲ್ಲಿದ್ದುಕೊಂಡು ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ಕೊರತೆಯಿರುವ ಆಸ್ಪತ್ರೆಗಳಿಗೆ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳಬೇಕು.
-ನೀಲಮ್ಮ ಮೇಟಿ,
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT