ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ಬದ್ಧ; ಕಳಲೆ

Last Updated 15 ಏಪ್ರಿಲ್ 2017, 5:31 IST
ಅಕ್ಷರ ಗಾತ್ರ

ನಂಜನಗೂಡು: ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ನೂತನ ಶಾಸಕ ಕಳಲೆ ಎನ್.ಕೇಶವಮೂರ್ತಿ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಸಕನಾದ ಮರುದಿನವೇ ಮೊದಲ ಕಾರ್ಯಕ್ರಮವಾಗಿ ಡಾ.ಬಿ.ಆರ್.ಅಂಬೇಡ್ಕರ್‍ ಜಯಂತಿ ಯಲ್ಲಿ ಪಾಲ್ಗೊಳ್ಳುವ ಸುಯೋಗ ದೊರೆಕಿದೆ. ಮತ ನೀಡಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಆರ್.ಧ್ರುವನಾರಾಯಣ ಅವರ ಸಹಕಾರ ಎಂದಿಗೂ ಮರೆಯಲಾರೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಎಂ.ಮಹದೇವು ಆರಂಭಿಸಿದ್ದ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಎರಡನೇ ಹಂತದ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸುತ್ತೇನೆ. ತಾಲ್ಲೂಕಿನಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಇತರೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT