ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶಸ್ಸಿಗೆ ತಾಳ್ಮೆ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ

Last Updated 15 ಏಪ್ರಿಲ್ 2017, 5:39 IST
ಅಕ್ಷರ ಗಾತ್ರ

ಚಾಮರಾಜನಗರ: ‘ಪ್ರತಿಯೊಬ್ಬರು ಡಾ.ಬಿ.ಆರ್. ಅಂಬೇಡ್ಕರ್‌ ಅವರಂತೆ ತಾಳ್ಮೆ ಮತ್ತು ಆತ್ಮವಿಶ್ವಾಸ ಬೆಳೆಸಿ ಕೊಳ್ಳಬೇಕು. ಆಗ ಬದುಕಿನಲ್ಲಿ ಯಶಸ್ವಿಯಾಗಲು ಸಾಧ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಸಲಹೆ ನೀಡಿದರು.

ನಗರದ ಜೆ.ಎಚ್.ಪಟೇಲ್್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಡಾ.ಬಿ.ಆರ್. ಅಂಬೇಡ್ಕರ್‌ ಅವರ 126ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾನತೆಯ ಸಮಾಜಕ್ಕಾಗಿ ಬದುಕನ್ನೇ ಸಮರ್ಪಿಸಿ ಕೊಂಡ ಅಂಬೇಡ್ಕರ್ ಮಹಿಳೆಯರ ಶ್ರೇಯೋಭಿವೃದ್ಧಿ, ಕಾರ್ಮಿಕರ ಕಲ್ಯಾಣ, ಶ್ರಮಿಕರಿಗೆ ಉದ್ಯೋಗ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಶ್ರಮಿಸಿದರು ಎಂದು ತಿಳಿಸಿದರು.

ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಅಂಬೇಡ್ಕರ್‌ ಅವರ ಘೋಷಣೆಗಳಾದ ಶಿಕ್ಷಣ, ಸಂಘಟನೆ,ಹೋರಾಟ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅವರ ಜೀವನ ಚರಿತ್ರೆ, ತತ್ವಾದರ್ಶ ಹಾಗೂ ವಿಚಾರಧಾರೆಗಳನ್ನು ಎಲ್ಲರು ತಿಳಿಯಬೇಕು ಎಂದು ಸಲಹೆ ನೀಡಿದರು.

ಅಂಬೇಡ್ಕರ್‌ ಅವರ ಜನ್ಮ ದಿನವನ್ನು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಅವರ 125ನೇ ಜನ್ಮದಿನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವರ್ಷಪೂರ್ತಿ ವಿಶೇಷ ಕಾರ್ಯಕ್ರಮಗಳ  ಮೂಲಕ ಯಶಸ್ವಿಯಾಗಿ ಆಚರಿಸ ಲಾಯಿತು ಎಂದರು.

ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾನಿಲಯದ ಮಾದರಿ ಯಲ್ಲಿ  ‘ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕ ನಾಮಿಕ್ಸ್’ ಹೆಸರಿನ ವಿ.ವಿ ಅನ್ನು   ಬೆಂಗಳೂರಿನಲ್ಲಿ ಸ್ಥಾಪಿಸ ಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮೀಸಲಿಟ್ಟಿದೆ. ರಾಜ್ಯದಲ್ಲಿ 127 ಅಂಬೇಡ್ಕರ್‌ ವಸತಿ ಶಾಲೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿರುವ ಅಂಬೇಡ್ಕರ್‌ ಭವನದ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಅಂಬೇಡ್ಕರ್‌ ಹೆಸರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ಬಳಿ ಬುದ್ಧವಿಹಾರ ಕೇಂದ್ರ ನಿರ್ಮಾಣಕ್ಕೆ 25 ಎಕರೆ ಭೂಮಿ ಗುರುತಿಸಿದ್ದು, ಶೀಘ್ರವೇ ಭೂಮಿಪೂಜೆ ನಡೆಯಲಿದೆ ಎಂದರು.

ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರಾಂಗದ ನಿರ್ದೇಶಕ ಪ್ರೊ. ಲಕ್ಷ್ಮಿನಾರಾಯಣ ಮಾತನಾಡಿ, ‘ಅಂಬೇಡ್ಕರ್‌ ಅವರ ಜೀವನ ಚರಿತ್ರೆ ಅಧ್ಯಯನ ಮಾಡಬೇಕು. ಅವರಲ್ಲಿದ್ದ ಸಾಧಿಸುವ ಛಲ, ಹಠ–ಗುಣ ಕಲಿಯಬೇಕು. ಶಿಕ್ಷಣ ಪಡೆಯ ಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬೌದ್ಧ ಬಿಕ್ಕು ಮನೋ ರಖ್ಖಿತ ಬಂತೇಜಿ, ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ರಾಮಚಂದ್ರ, ಉಪಾಧ್ಯಕ್ಷ ಎಸ್.ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕೆ. ಬೊಮ್ಮಯ್ಯ, ಕಾಡಾ ಅಧ್ಯಕ್ಷ ಎಚ್.ಎಸ್.ನಂಜಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಎಂ.ಚಿನ್ನಸ್ವಾಮಿ, ನಗರಸಭೆ ಉಪಾಧ್ಯಕ್ಷ ಆರ್.ಎಂ.ರಾಜಪ್ಪ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಲದೀಪ್‌ ಕುಮಾರ್‌ ಆರ್.ಜೈನ್‌, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಹರೀಶ್‌ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್. ಸತೀಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT