ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ: 184 ಜನರಿಗೆ ಯಶಸ್ವಿ ನೇತ್ರ ಶಸ್ತ್ರ ಚಿಕಿತ್ಸೆ

Last Updated 15 ಏಪ್ರಿಲ್ 2017, 10:00 IST
ಅಕ್ಷರ ಗಾತ್ರ

ಹುಣಸಗಿ:  ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ ನೇತ್ರ ಉಚಿತ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಒಟ್ಟು 184 ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎಸ್‌.ಬಿ.ಪಾಟೀಲ ತಿಳಿಸಿದರು.

ಹುಬ್ಬಳ್ಳಿಯ ಡಾ. ಎಂ.ಎಂ.ಜೋಷಿ ಆಸ್ಪತ್ರೆ ಹಾಗೂ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರದಿಂದ ಬುಧವಾರದವರೆಗೆ ಒಟ್ಟು 425 ಜನರ ಕಣ್ಣಿನ ಪೊರೆ ತಪಾಸಣೆ ಮಾಡಲಾಗಿತ್ತು.  ಮಧುಮೇಹ, ರಕ್ತದೊತ್ತಡ ಪರೀಕ್ಷೆ ಮಾಡಿ ಅವರಲ್ಲಿ 251 ಅರ್ಹರೋಗಿಗಳನ್ನು ಆಯ್ಕೆ ಮಾಡಲಾಗಿತ್ತು ಎಂದು ಆರೋಗ್ಯ ಕೇಂದ್ರದ  ಡಾ. ವಿವೇಕ.ಸಿ.ಬಾಗೋಡಿ ತಿಳಿಸಿದರು.

ಶಸ್ತ್ರಚಿಕಿತ್ಸೆ ಪ್ರಕ್ರಿಯೆ ಬಗ್ಗೆ ಹುಬ್ಬಳ್ಳಿಯ ಡಾ.ಎಂ.ಎಂ.ಜೋಷಿ ಆಸ್ಪತ್ರೆ ನೇತ್ರ ತಜ್ಞ ಡಾ.ಸಂಜಯ ಕುಲಕರ್ಣಿ ವಿವರಣೆ ನೀಡಿದರು. ಈ ಶಿಬಿರದಿಂದ ನಮ್ಮಂತಹ ಬಡರೋಗಿಗಳಿಗೆ ಬಹಳ ಸಹಾಯಕವಾಗಿದೆ.

ವಯಸ್ಸಾಗಿದ್ದರಿಂದ ದೂರದ ಊರಿಗೆ ಹೊಗಿ ಶಸ್ತ್ರಚಿಕಿತ್ಸೆ ಮಾಡಿಸಲು ಸಾಧ್ಯವಾಗಿರಲಿಲ್ಲ. ವೈದ್ಯರೇ ಇಲ್ಲಿ ಬಂದು ಶಸ್ತ್ರಚಿಕಿತ್ಸೆ ಮಾಡಿದ್ದರಿಂದ ಉಪಯುಕ್ತವಾಯಿತು ಎಂದು ಗ್ರಾಮಸ್ಥರಾದ  ಕರೆಮ್ಮ ಹುಣಸಿಹೊಳೆ ಹಾಗೂ ನರಸಪ್ಪ ಅಗ್ನಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT