ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಭೂಷಣ್‌ ಜಾಧವ್ ಗಲ್ಲುಶಿಕ್ಷೆ ರದ್ದತಿಗೆ ಒತ್ತಾಯ

Last Updated 16 ಏಪ್ರಿಲ್ 2017, 6:22 IST
ಅಕ್ಷರ ಗಾತ್ರ

ಮೈಸೂರು: ಭಾರತೀಯ ಸೇನೆಯ ಮಾಜಿ ಸೈನಿಕ ಕುಲಭೂಷಣ್‌ ಜಾಧವ್‌ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ನ್ಯಾಯಾಲಯದ ಕ್ರಮವನ್ನು ವಿರೋಧಿಸಿ ಕರ್ನಾಟಕ ಪ್ರಜಾ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪಾದಯಾತ್ರೆ ನಡೆಸಿದರು.

ಇಲ್ಲಿನ ಜಿಲ್ಲಾ ನ್ಯಾಯಾಲಯದ ಗಾಂಧಿ ಪುತ್ಥಳಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದರು. ಶಿಕ್ಷೆಯನ್ನು ರದ್ದುಪಡಿಸಿ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕುಲಭೂಷಣ್‌  ಅವರಂಥ ನಿಷ್ಠಾವಂತ ಅಧಿಕಾರಿಯ ವಿರುದ್ಧ ಪಾಕಿಸ್ತಾನ ಇಲ್ಲಸಲ್ಲದ ಆಪಾದನೆ ಮಾಡಿದೆ. ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಲಾಗಿದೆ. ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ಗಲ್ಲಿಗೆ ಏರಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಭೂಷಣ್‌ ಅವರನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಕೂಡ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಆರೋಪಗಳನ್ನು ಮಾತ್ರ ಪರಿಗಣಿಸಿ, ಕುಲಭೂಷಣ್‌ ವಾದಕ್ಕೆ ಅವಕಾಶ ನೀಡಿಲ್ಲ. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಚಾರ ಎಂದು ಆರೋಪಿಸಿದರು.

ಭಾರತದ ಪ್ರಜೆಗೆ ಗರಿಷ್ಠ ಪ್ರಮಾಣ ಶಿಕ್ಷೆ ವಿಧಿಸಿದ ಪಾಕಿಸ್ತಾನದ ಕ್ರಮವನ್ನು ಪ್ರತಿಯೊಬ್ಬರೂ ಖಂಡಿಸಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸ ಬೇಕು. ಆ ರಾಷ್ಟ್ರದ ಮೇಲೆ ಒತ್ತಡ ತಂದು ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಶಿವಣ್ಣ, ಸಂಚಾಲಕ ದುದ್ದಗೆರೆ ಶ್ರೀನಿವಾಸ್‌, ಮುಖಂಡರಾದ ಎಂ. ಬಸವರಾಜು, ವಿ.ಮಹದೇವಸ್ವಾಮಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT