ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಖರ ಮಾಹಿತಿಯೊಂದಿಗೆ ಹಾಜರಾಗಿ

Last Updated 16 ಏಪ್ರಿಲ್ 2017, 6:43 IST
ಅಕ್ಷರ ಗಾತ್ರ

ಹಾಸನ: ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಅಭಿವೃದ್ಧಿಗಾಗಿ ವಿವಿಧ ಉಪಯೋಜನೆಯಡಿ ಇಲಾಖೆಗಳಿಗೆ 2017-18ನೇ ಸಾಲಿಗೆ ನಿಗದಿಪಡಿಸಿರುವ ಅನುದಾನದಲ್ಲಿ ಕೈಗೊಳ್ಳಲಿರುವ ವಿವಿಧ ಕಾರ್ಯಗಳ ಬಗ್ಗೆ ನಿಖರ ಮಾಹಿತಿ ಯೊಂದಿಗೆ ಸಭೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ವಿ.ಚೈತ್ರಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಮೂಲಕ ಪರಿಶಿಷ್ಟ ಜಾತಿ ಪಂಗಡಗಳ ಉಪಯೋಜನೆಯಡಿ ಸಂಪನ್ಮೂಲ ಹಂಚಿಕೆ ಮತ್ತು ಬಳಕೆ ಕುರಿತ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸರ್ಕಾರದಿಂದ ಮಂಜೂರಾ ಗಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪರಿಶಿಷ್ಟ ಜಾತಿ ಜನಾಂಗದ ಅಭಿವೃದ್ಧಿಗೆ ವಿವಿಧ ಸೌಲಭ್ಯ ಗಳನ್ನು ಸಕಾಲದಲ್ಲಿ ಒದಗಿಸಬೇಕು ಎಂದು ಅವರು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ ಜಿಲ್ಲೆಯಲ್ಲಿರುವ ವಿವಿಧ ಕೆರೆಗಳಲ್ಲಿ ನೀರು ಸಂಗ್ರಹಣೆಗಾಗಿ ಜೆಸಿಬಿ ಮೂಲಕ ಮಣ್ಣು ತೆಗೆದು ರೈತರ ಜಮೀನುಗಳಿಗೆ ಸಾಗಣೆ ಮಾಡಲು ಅವಕಾಶ ನೀಡಿದೆ. ಆದರೆ ಮಣ್ಣು ತೆಗೆಯುವ ಸಂದರ್ಭದಲ್ಲಿ ನಿಯಮವನ್ನು ಪಾಲಿಸಬೇಕು. ನಿಗದಿತ ಸ್ಥಳದಲ್ಲಿ ತಾಂತ್ರಿಕವಾಗಿ ಎಷ್ಟು ಪ್ರಮಾಣ ದಲ್ಲಿ  ತೆಗೆಯಬೇಕು. ಆಳದ ಮಿತಿಯನ್ನು ನಿಗದಿಗೊಳಿಸಬೇಕು. ಅನಾವಶ್ಯಕವಾಗಿ ತೆಗೆಯುವುದರಿಂದ ಪರಿಸರಕ್ಕೆ ಹಾನಿ ಯಾಗುತ್ತದೆ. ಇದರ ಬಗ್ಗೆ ಗಮನ ಹರಿಸು ವುದರೊಂದಿಗೆ ಸಮತೋಲನ ಕಾಪಾಡ ಬೇಕು ಎಂದು ಸಲಹೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ದವರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಕೊಳವೆ ಬಾವಿಗಳನ್ನು ನಿರ್ದಿಷ್ಟ ಪ್ರಮಾಣದಲ್ಲಿ ನಿಯಮಾನು ಸಾರ ತೆಗೆದು ನೀರು ಪೂರೈಕೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇತರ ಕೆಲವೊಂದು ಇಲಾಖೆಗಳು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಅನುದಾನದ ಸದ್ಬಳಕೆಗೆ ಅಗತ್ಯ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುರುಷೋತ್ತಮ್ ಸಭೆಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT