ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹5 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ

Last Updated 16 ಏಪ್ರಿಲ್ 2017, 7:18 IST
ಅಕ್ಷರ ಗಾತ್ರ

ಉಡುಪಿ: ‘ನಗರಾಭಿವೃದ್ಧಿ ಪ್ರಾಧಿಕಾರದ ₹5 ಕೋಟಿ ಅನುದಾನದಿಂದ ಕೆರೆಗ ಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ಮೀನುಗಾರಿಕೆ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.ಬೀಡಿನಗುಡ್ಡೆ ಸಮೀಪ ಇರುವ ಮಜಲ್‌ ಕೆರೆ ಅಭಿವೃದ್ಧಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ನಗರಾಭಿವೃದ್ಧಿ ಪ್ರಾಧಿ ಕಾರ ನಕ್ಷೆ ಮಂಜೂರಾತಿ ನೀಡುವಾಗ ಈ ಹಿಂದೆ ಸೇಂಟ್ಸ್‌ಗೆ ₹1,000 ಕೆರೆ ಅಭಿವೃದ್ಧಿ ಶುಲ್ಕ ವಸೂಲಿ ಮಾಡುತ್ತಿತ್ತು. ಆದರೆ, ಅದನ್ನು ₹600ಕ್ಕೆ ಇಳಿಸಲಾಗಿದೆ. ಈ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸದೆ ಕೇವಲ ಕೆರೆ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ. ನೀರಿನ ಸಮಸ್ಯೆ ಬಗೆಹರಿಸಲು ಇದರಿಂದ ಸಾಧ್ಯವಾ ಗಲಿದೆ’ ಎಂದು ಅವರು ಹೇಳಿದರು.

‘ಸಣ್ಣ ನೀರಾವರಿ ಇಲಾಖೆ ಮೂಲ ಕವೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೆರೆ ಅಭಿವೃದ್ಧಿ ಮತ್ತು ಕಿಂಡಿ ಅಣೆಕಟ್ಟೆ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ ಈಗಾಗಲೇ ₹10 ಕೋಟಿ ವಿನಿಯೋಗಿಸ ಲಾಗಿದೆ’ ಎಂದು ಅವರು ಹೇಳಿದರು.‘ಪ್ರಾಧಿಕಾರದ ವತಿಯಿಂದ ಒಟ್ಟು 16 ಕೆರೆಗಳನ್ನು ಅಭಿವೃದ್ಧಿ ಪಡಿಸಲಾ ಗುತ್ತಿದ್ದು, ಈಗಾಗಲೇ ನಾಲ್ಕು ಕೆರೆಗಳ ಅಭಿವೃದ್ಧಿ ಕಾಮಗಾರಿ ಪೂರ್ಣ ಗೊಂಡಿದೆ. ಉಳಿದವು ಪ್ರಗತಿಯಲ್ಲಿದ್ದು ಜೂನ್ ವೇಳೆಗೆ ಎಲ್ಲ ಕಾಮಗಾರಿಗಳು ಮುಕ್ತಾಯವಾಗಲಿದೆ’ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ ಹೇಳಿದರು.

‘ಕೆರೆಯ ಹೂಳೆತ್ತಿ ಸುತ್ತಲೂ ತಡೆ ಗೋಡೆ ನಿರ್ಮಾಣ ಮಾಡಲಾಗುವುದು. ಜೂನ್ ವೇಳೆಗೆ ಕಾಮಗಾರಿ ಪೂರ್ಣ ಗೊಳ್ಳಲಿದೆ’ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್‌ ಹೇಳಿದರು.ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಸದಸ್ಯರಾದ ರಮೇಶ್ ಕಾಂಚನ್‌, ಶಾಂತಾರಾಂ ಸಾಲ್ವಂಕರ್‌,  ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಉಪ ಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT