ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಇಂದಿಗೂ ಜೀವಂತ–ವಿಷಾದ

Last Updated 16 ಏಪ್ರಿಲ್ 2017, 10:41 IST
ಅಕ್ಷರ ಗಾತ್ರ

ಶಿಗ್ಗಾವಿ: ‘ಡಾ.ಬಿ.ಆರ್‌.ಅಂಬೇಡ್ಕರ್‌ ರಚಿಸಿದ ಸಂವಿಧಾನವು ಮೌಲ್ಯಾಧಾರಿತ ಬದುಕಿಗೆ ಬೆಳಕಾಗಿ ನಿಂತಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಶುಕ್ರವಾರ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಅಂಗವಾಗಿ ಜೈ ಭೀಮ್‌ ಪರಿಶಿಷ್ಟ ಜಾತಿ ಸಮಗ್ರ ಅಭಿವೃದ್ಧಿ ಸಂಸ್ಥೆ, ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಭೀಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಂಕಾಪುರ ಪಟ್ಟಣದಲ್ಲಿ ಅಂಬೇಡ್ಕರ್‌ ಭವನಕ್ಕೆ ಈಗಾಗಲೆ ₹50ಲಕ್ಷ ಬಿಡುಗಡೆಯಾಗಿದ್ದು, ತಕ್ಷಣ ಕಾಮಗಾರಿಗೆ ಚಾಲನೆ ಸಿಗಲಿದೆ’ ಎಂದರು.ವಿಧಾನ ಪರಿಷತ ಸದಸ್ಯ ಸೋಮಣ್ಣ ಬೇವಿನಮರದ ಮಾತನಾಡಿದರು.ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ ಕಾಂದ್ರೋಳ್ಳಿ ಮಾತನಾಡಿ, ‘ಸಂಘಟನೆಗಳು ಅಂಬೇಡ್ಕರ್ ಹೆಸರಿನಲ್ಲಿ ಬದುಕುತ್ತಿವೆಯೇ ವಿನಃ ನಿಜವಾದ ಆಸೆ ಈಡೇರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಈ ಜನಾಂಗ ಈಗಲೂ ಹಿಂದುಳಿದೆ’ ಎಂದು ವಿಷಾದಿಸಿದರು.

ಜಾನಪದ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ.ಡಿ.ಬಿ.ನಾಯಕ ಮಾತನಾಡಿ, ‘ಜಾತ್ಯತೀತ ರಾಷ್ಟ್ರವೆಂದು ಹೇಳಿದರೂ ಜಾತಿಗಳು ಇಂದಿಗೂ ತಾಂಡವಾಡುತ್ತಿವೆ’ ಎಂದರು.ಡಾ.ಆರ್‌.ಎಸ್‌.ಅರಳೆಲೆಮಠ ಮಾತನಾಡಿದರು. ಜೈ ಭೀಮ್‌ ಪರಿಶಿಷ್ಟ ಜಾತಿ ಸಮಗ್ರ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಗುರು ಚಲವಾದಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಶಾಬಿರಾಭಿ ಯಲಗಚ್ಚ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ ಮಾಳಗಿಮನಿ, ಮುಖ್ಯಾಧಿಕಾರಿ ಕುಮಾರ, ಶಿವಾನಂದ ಗೌಡರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT