ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಅಭಿವೃದ್ಧಿಗೆ ಬದ್ಧ: ಸಚಿವೆ

Last Updated 17 ಏಪ್ರಿಲ್ 2017, 6:26 IST
ಅಕ್ಷರ ಗಾತ್ರ
ಕಾರಟಗಿ: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧ. ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದರು.
 
ಶಾಸಕ ಶಿವರಾಜ್ ತಂಗಡಗಿ ಅಭಿಮಾನಿ ಬಳಗ ಮತ್ತು ತಂಗಡಗಿ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
 
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯದಲ್ಲಿ ಈಚೆಗೆ ನಡೆದ ಉಪಚುನಾವಣೆ ಫಲಿತಾಂಶ ಮುಂದಿನ 2018ರ ವಿಧಾನಸಭಾ ಚುನಾವಣೆ ದಿಕ್ಸೂಚಿ ಎಂದರು.
 
ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಸಾಂಕೇತಿಕವಾಗಿ ನಡೆಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು. 
 
ಶಾಸಕ ಶಿವರಾಜ್ ತಂಗಡಗಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬೆವರು ಸುರಿಸಿ ಸಂಪಾದಿಸಿ ಹಣದಿಂದ ಮಹಿಳಾ ದಿನಾಚರಣೆ ಆಚರಣೆ ಮಾಡುತ್ತಿದ್ದು, ಬಿಜೆಪಿಯವರು ಟೀಕಿಸಿದಂತೆ ಲೂಟಿ ಹೊಡೆದ ಹಣದಿಂದ ಅಲ್ಲ ಎಂದು ಹೇಳಿದರು.
 
ಮಹಿಳಾ ದಿನಾಚರಣೆಗೆ ಸಲ್ಲದ ಟೀಕೆ ಮಾಡುವುದು ಸರಿಯಲ್ಲ. ಮುತ್ತೈದೆಯರಿಗೆ ಪೂಜೆ ಮಾಡಿ ಉಡಿ ತುಂಬಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಇದ್ದು, ಅದಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
 
ಅಗ್ನಿಸಾಕ್ಷಿ ಧಾರವಾಹಿ ನಟಿ ಸನ್ನಿಧಿ ಮಾತನಾಡಿದರು.  ವಿಧಾನಪರಿಷತ್ ಸದಸ್ಯೆ ಜಯಮಾಲಾ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಸದಸ್ಯರಾದ ವಿಶ್ವನಾಥರಡ್ಡಿ ಹೊಸಮನಿ, ಶಾಂತಾ ರಮೆಶ ನಾಯಕ್, ವಿಜಯಲಕ್ಷ್ಮೀ ಪ್ರಭಾಕರ್, ಅಮರೇಶ ಗೋನಾಳ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವಂತಗೌಡ ಪೊಲೀಸ್ ಪಾಟೀಲ್, ಪುರಸಭೆ ಅಧ್ಯಕ್ಷೆ ಅನ್ನಪೂರ್ಣಮ್ಮ ಬೂದಿ, ವಿಶೇಷ ಎಪಿಎಂಸಿ ಅಧ್ಯಕ್ಷ ಶಶಿಧರಗೌಡ ಪಾಟೀಲ್ ಇದ್ದರು.
 
ಬೀದರನ ಬಸವ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ತಾಯಿ, ಹೆಬ್ಬಾಳ ಮಠದ ನಾಗಭೂಷಣ ಶಿವಾಚಾರ್ಯ, ಸುಳೇಕಲ್‌ ಪದ್ಮಾಕ್ಷರಯ್ಯ ತಾತನವರು, ಅರಳಳ್ಳಿ ಗವಿಸಿದ್ದಯ್ಯತಾತ ಸಾನಿಧ್ಯ ವಹಿಸಿದ್ದರು. ವಿದ್ಯಾ ಶಿವರಾಜ್ ತಂಗಡಗಿ ಪ್ರಾಸ್ತಾವಿಕ ಮಾತನಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT