ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಇಂದು

Last Updated 17 ಏಪ್ರಿಲ್ 2017, 7:17 IST
ಅಕ್ಷರ ಗಾತ್ರ
ನಂಜನಗೂಡು: ನಗರದ ಯಾತ್ರಿ ಭವನದಲ್ಲಿ ಏ.17ರಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆ ಯಲಿದೆ ಎಂದು ಬಿಜೆಪಿ ಗ್ರಾಮಾಂತರ ಘಟಕದ ಜಿಲ್ಲಾ ಉಪಾಧ್ಯಕ್ಷ ಎಸ್. ಮಹದೇವಯ್ಯ ತಿಳಿಸಿದರು.
 
ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಉಪಚುನಾವಣೆ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ. ಅಲ್ಲದೆ, ಬಿಜೆಪಿಗೆ 64 ಸಾವಿರ ಮತ ನೀಡಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಸಮಾವೇಶದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
 
ಕಾಂಗ್ರೆಸ್ ಸರ್ಕಾರ ₹ 500 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು, ಕ್ಷೇತ್ರದ 24 ಸಾವಿರ ಜನರಿಗೆ ವಿವಿಧ ಅಭಿವೃದ್ಧಿ ನಿಗಮಗಳಿಂದ ಸಾಲ ನೀಡಿರು ವುದು ಹಾಗೂ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಕ್ಷೇತ್ರದಲ್ಲಿ ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚುರಪಡಿ ಸದಿರುವುದು ಸೋಲಿಗೆ ಕಾರಣ ವಾಯಿತು ಎಂದು ಹೇಳಿದರು.
 
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆಂಡಗಣ್ಣಪ್ಪ, ಸಿಂಧೂವಳ್ಳಿ ಕೆಂಪಣ್ಣ, ಚಿಕ್ಕರಂಗನಾಯ್ಕ, ಎನ್.ಆರ್. ಕೃಷ್ಣಪ್ಪ ಗೌಡ, ವಿನಯ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT