ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಸದಸ್ಯೆ ವಿಮಲಾಗೌಡ ನಿಧನ

Last Updated 17 ಏಪ್ರಿಲ್ 2017, 14:04 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಬಿಜೆಪಿ ಸದಸ್ಯೆ ವಿಮಲಾಗೌಡ (63 ವರ್ಷ) ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು.

ಉಸಿರಾಟ ಹಾಗೂ ಹೃದಯ ಸಂಬಂಧಿತ ತೊಂದರೆಯಿಂದ ಬಳಲುತ್ತಿದ್ದ ವಿಮಲಾಗೌಡ ಅವರು ತಿಂಗಳಿಂದ ನಗರದ ನಾರಾಯಾಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

2011ರಿಂದ 2014ರ ವರೆಗೂ ಉಪ ಸಭಾಪತಿಯಾಗಿ ವಿಮಲಾಗೌಡ ಜವಾಬ್ದಾರಿ ನಿರ್ವಹಿಸಿದ್ದರು. ಮೂರು ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.

1955ರ ನವೆಂಬರ್ 20ರಂದು ಜನಿಸಿದ ಅವರು 1980ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT