ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Last Updated 18 ಏಪ್ರಿಲ್ 2017, 3:28 IST
ಅಕ್ಷರ ಗಾತ್ರ
ದಾವಣಗೆರೆ: ಬರಗಾಲ ಇದ್ದು, ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದರು.
 
ಅಂತರರಾಷ್ಟ್ರೀಯ ಹುತಾತ್ಮ ರೈತ ದಿನಾಚರಣೆ ಅಂಗವಾಗಿ ದಾವಣಗೆರೆ ತಾಲ್ಲೂಕು ಕಚೇರಿ ಮುಂಭಾಗ ಧರಣಿ ಕುಳಿತು ಹಕ್ಕೊತ್ತಾಯ ಮಂಡಿಸಿದರು.
ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಅಲ್ಲದೇ, ಹೊಸ ಸಾಲ ನೀಡಬೇಕು. ಬಗರ್‌ಹುಕುಂ ಮತ್ತು ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
 
ಬರಗಾಲ ಪ್ರದೇಶದ ರೈತರ ಒಂದು ಎಕರೆಗೆ ಕನಿಷ್ಠ ₹ 20,000 ಪರಿಹಾರ ನೀಡಬೇಕು. ಇದೇ ಪ್ರದೇಶದ ರೈತರಿಗೆ ಮುಂದಿನ ಮುಂಗಾರಿನಲ್ಲಿ ಉಚಿತವಾಗಿ ಬೀಜ, ಗೊಬ್ಬರ ಮತ್ತು ಔಷಧಗಳನ್ನು ನೀಡಬೇಕು. ಮುಂದಿನ ಬೆಳೆ ಬರುವ ವರೆಗೂ ರೈತ ಕುಟುಂಬಗಳಿಗೆ ಉಚಿತ ವಾಗಿ ಪಡಿತರ ಸರಬರಾಜು ಮಾಡ ಬೇಕು ಎಂದು ಆಗ್ರಹಿಸಿದರು.
 
ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ 12 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಅಸಮಾನತೆ ಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಹೊನ್ನೂರು ಮುನಿಯಪ್ಪ, ಮಲ್ಲಶೆಟ್ಟಿ ಚನ್ನಬಸಪ್ಪ, ಚಿನ್ನಸಮುದ್ರ ಶೇಖರ್‌ ನಾಯ್ಕ ಇದ್ದರು.
 
ಚನ್ನಗಿರಿ:  ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. 
ಪಟ್ಟಣದ ಬಸ್‌ನಿಲ್ದಾಣದಿಂದ ಮೆರವಣಿಗೆ ಬಂದ ರೈತರು, ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಎಸ್.ಪದ್ಮಕುಮಾರಿ ಅವರಿಗೆ ಮನವಿ ಸಲ್ಲಿಸಿದರು.
 
ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜಡಿಯಪ್ಪ ದೇಸಾಯಿ, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ. ಕುಮಾರ ಸ್ವಾಮಿ, ಪ್ರಹ್ಲಾದ್, ಶಶಿಧರ್, ಬಿ.ಎಂ. ರವಿ, ಜಕಲಿ ನಾಗರಾಜ್, ಸಿ.ಚಂದ್ರಪ್ಪ, ಹನುಮಂತಪ್ಪ, ಕುಮಾರ್ ಇದ್ದರು. 
 
ಹೊನ್ನಾಳಿ : ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕವು ಸೋಮವಾರ ಟಿ.ಬಿ.ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಬಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು. 
 
ತಾಲ್ಲೂಕು ರೈತ ಸಂಘದ ಹಸಿರು ಸೇನೆಯ ಸಂಘಟನಾ ಕಾರ್ಯದರ್ಶಿ ಉಮೇಶ್ ಬೀರಗೊಂಡನಹಳ್ಳಿ, ಸಾಸ್ವೆ ಹಳ್ಳಿ ಭಾಗದ ಉಪಾಧ್ಯಕ್ಷರಾದ ಜಿ.ಬಿ. ಧನರಾಜಪ್ಪ, ಎಚ್.ಜಿ. ಬಸವರಾಜಪ್ಪ ದೊಡ್ಡೇರಿ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕುರುವ ಗಣೇಶ್, ತಾಲ್ಲೂಕು ಗೌರವಾಧ್ಯಕ್ಷ ಚನ್ನಪ್ಪ ನಂದೇರ್, ತಾಲ್ಲೂಕು ಅಧ್ಯಕ್ಷ ಜಿ.ಎಚ್. ಶಿವಾನಂದಪ್ಪ, ಪ್ರಧಾನ ಕಾರ್ಯದರ್ಶಿ ಶುಂಠಿ ಗಣೇಶಪ್ಪ, ಶತಕೋಟಿ ಬಸಪ್ಪ, ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT