ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗುಗುಂಡಿ, ಕೆರೆಗಳಿಂದ ಅಂತರ್ಜಲ ವೃದ್ಧಿ

ಕುಂದೂರು: ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಶಾಂತನಗೌಡ
Last Updated 18 ಏಪ್ರಿಲ್ 2017, 3:31 IST
ಅಕ್ಷರ ಗಾತ್ರ
ಸಾಸ್ವೆಹಳ್ಳಿ: ಕೆರೆ, ಕಟ್ಟೆಗಳಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ನೀರು ಸಂಗ್ರಹವಾಗಬೇಕು ಹಾಗೂ ಕೊಳವೆಬಾವಿಗಳಿಗೆ ಇಂಗು ಗುಂಡಿಗಳನ್ನು ನಿರ್ಮಿಸಿಕೊಂಡರೆ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. 
 
ಹೋಬಳಿಯ ಕುಂದೂರು ಗ್ರಾಮದ ಕೆರೆಯಲ್ಲಿ ‘ರೈತ ಕಾಯಕ ಕೆರೆ’ ಯೋಜನೆಯಡಿ ಕೆರೆ ಹೂಳೆತ್ತುವ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. 
 
₹ 18 ಲಕ್ಷ ವೆಚ್ಚದಲ್ಲಿ ಕುಂದೂರು ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು. ಕೆರೆಯ ಹೂಳು ತೆಗೆಯುವುದ ರಿಂದ ಅಧಿಕ ಪ್ರಮಾಣದಲ್ಲಿ ನೀರು ಶೇಖರಣೆಗೊಳ್ಳುತ್ತದೆ. ಕೃಷಿ ಹೊಂಡಗಳ ನಿರ್ಮಾಣ, ಮಳೆ ನೀರು ಸಂಗ್ರಹ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಎಲ್ಲಾ ರೈತರು ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
 
ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ₹ 1 ಕೋಟಿ ಮೀಸಲಿಡಲಾಗಿದೆ. ತಾಲ್ಲೂಕಿನ ಬೆಳಗುತ್ತಿ ಗ್ರಾಮದ ಇಸ್ರಾಪುರ ಕೆರೆಯನ್ನು ₹ 39 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ₹ 1 ಕೋಟಿ ವೆಚ್ಚದಲ್ಲಿ ಕತ್ತಿಗೆ ಗ್ರಾಮದ ಹೊಸಕೆರೆ ಅಭಿವೃದ್ಧಿಪಡಿಸಲಾಗಿದೆ. ಗ್ರಾಮದ ಇನ್ನೊಂದು ಕೆರೆ ಅಭಿವೃದ್ಧಿ ಮತ್ತು ಕೆರೆಗೆ ನೀರು ತುಂಬಿಸಲು ₹ 1.5 ಕೋಟಿ ವ್ಯಯಿಸಲಾಗಿದೆ ಎಂದು ತಿಳಿಸಿದರು.
 
₹ 105 ಕೋಟಿ ವೆಚ್ಚದಲ್ಲಿ ಚೀಲೂರು ಸಮೀಪದ ತುಂಗಭದ್ರಾ ನದಿಯಿಂದ ತಾಲೂಕಿನ 30 ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
 
ಉದ್ಯೋಗ ಖಾತ್ರಿ ಅನುದಾನದಲ್ಲಿ ‘ನಮ್ಮ ಹೊಲ ನಮ್ಮ ರಸ್ತೆ’ ಯೋಜನೆಯಡಿ ರೈತರು ಜಮೀನುಗಳಿಗೆ ಸಂಪರ್ಕ ರಸ್ತೆ ನಿರ್ಮಿಸಿಕೊಳ್ಳಬೇಕು. ಶೀಘ್ರದಲ್ಲೇ ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದರು.
 
ರೈತರ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸಾಕಷ್ಟು ಒತ್ತಡ ಹೇರಿ ದ್ದೆವು. ಆದರೆ, ಬಜೆಟ್‌ನಲ್ಲಿ ಆ ಬಗ್ಗೆ ಘೋಷಣೆಯಾಗಲಿಲ್ಲ. ಮುಂದಿನ ದಿನ ಗಳಲ್ಲಿ ಈ ಬಗ್ಗೆ ಒತ್ತಾಯಿಸುತ್ತೇವೆ. ಸಾಲ ಮನ್ನಾ ಬಗ್ಗೆ ಕೇಂದ್ರ ಸರ್ಕಾರ ಕೂಡ ಮುಂದಾಗಬೇಕಿದೆ ಎಂದು ಹೇಳಿದರು.
 
ಜಿಲ್ಲಾ ಪಂಚಾಯ್ತಿ ಸದಸ್ಯೆ ದೀಪಾ ಜಗದೀಶ್ ಮಾತನಾಡಿದರು. ಕುಂದೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಸಾಕಮ್ಮ, ಗ್ರಾಮ ಪಂಚಾಯ್ತಿ ಸದಸ್ಯರು, ಕುಂದೂರು ಇರ್ಫಾನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT